ಹೈದರಾಬಾದ್(ತೆಲಂಗಾಣ): ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 78,357 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ ಮತ್ತು 1045 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ದೇಶದಲ್ಲಿ ಈವರೆಗೆ 37,69,524 ಮಂದಿ ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ. ಈ ಮಹಾಮಾರಿಗೆ 66,333 ಮಂದಿ ಬಲಿಯಾಗಿದ್ದಾರೆ. ಆದರೆ, ಸಾವಿನ ಪ್ರಮಾಣದಲ್ಲಿ 1.76 ಕ್ಕೆ ಇಳಿಕೆಯಾಗಿದೆ.
ಸದ್ಯ ದೇಶದಲ್ಲಿ 8,01,282 ಸಕ್ರಿಯ ಪ್ರಕರಣಗಳಿದ್ದು, ಇದು ಒಟ್ಟು ಕ್ಯಾಸೆಲೋಡ್‌ನ ಶೇಕಡಾ 21.26 ರಷ್ಟಿದೆ ಎಂದು ಡೇಟಾ ತಿಳಿಸಿದೆ. 29,019,09 ಮಂದಿ ಗುಣಮುಖವಾಗಿ ಬಿಡುಗಡೆಯಾಗಿದ್ದಾರೆ. ಅಂದರೆ ಚೇತರಿಕೆ ಪ್ರಮಾಣ ಶೇಕಡಾ 76.98 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಪ್ರಕಾರ, ಸೆಪ್ಟೆಂಬರ್ 1 ರವರೆಗೆ ಒಟ್ಟು 4,43,37,201 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 10,12,367 ಪರೀಕ್ಷೆಗಳನ್ನು ಮಂಗಳವಾರ ಮಾಡಲಾಗಿದೆ.