ಚೆನ್ನೈ: ಮದ್ರಾಸ್ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ 79 ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ಹಿರಿಯ ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಡಿಸೆಂಬರ್ 1ರಿಂದ ಐಐಟಿ - ಎಂನಿಂದ ತೆಗೆದ 978 ಮಾದರಿಗಳಲ್ಲಿ ಇಲ್ಲಿಯವರೆಗೆ ಒಟ್ಟು 183 ಜನರಿಗೆ ಕೊರೊನಾ ಇರುವುದು ದೃಢವಾಗಿದೆ. ಇನ್ನು 25 ಮಾದರಿಗಳ ಫಲಿತಾಂಶ ಬರಲಿದೆ ಎಂದು ತಮಿಳುನಾಡು ಆರೋಗ್ಯ ಕಾರ್ಯದರ್ಶಿ ಜೆ.ರಾಧಾಕೃಷ್ಣನ್ ತಿಳಿಸಿದ್ದಾರೆ.
ಇನ್ನು ಶೇ.15 ಪಟ್ಟು ಕಡಿಮೆಯಾಗಿದೆ ಎಂದು ತಿಳಿದು ಬಂದಿದೆ. ಇನ್ನು ಸೋಂಕಿತರಿಗೆ ಕಿಂಗ್ಸ್ ಇನ್‌ಸ್ಟಿಟ್ಯೂಟ್ ಆಫ್ ಪ್ರಿವೆಂಟಿವ್ ಮೆಡಿಸಿನ್ ಅಂಡ್ ರಿಸರ್ಚ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.