ನವದೆಹಲಿ: ತಬ್ಲಿಘಿ ಜಮಾತ್ನಲ್ಲಿ ನಡೆದಿದ್ದ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿ ಎಲ್ಲರ ಕಣ್ಣು ತಪ್ಪಿಸಿ ಮಲೇಷ್ಯಾಕ್ಕೆ ಪ್ರಯಾಣ ಬೆಳೆಸುತ್ತಿದ್ದ 8 ಮಂದಿಯ ಬಂಧನ ಮಾಡುವಲ್ಲಿ ದೆಹಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಲಿಂಡೋ ಏರ್ವೇಸ್ನಲ್ಲಿ ದೆಹಲಿ - ಮುಂಬೈ ಮೂಲಕ ಕೌಲಾಲಂಪುರ ವಿಮಾನದಿಂದ ತಕ್ಷಣವೇ ಅವರನ್ನ ಕೆಳಗಿಳಿಸಿ ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸಿದೆ. ನವದೆಹಲಿಯಲ್ಲಿ ನಡೆದಿದ್ದ ತಬ್ಲಿಘಿ ಜಮಾತ್ ಸಭೆಯಲ್ಲಿ ಭಾಗಿಯಾಗಿದ್ದ ಅನೇಕರಲ್ಲಿ ಕೋವಿಡ್-19 ಕಾಣಿಸಿಕೊಂಡಿದ್ದು, ಈಗಾಗಲೇ ಅನೇಕರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ತಬ್ಲಿಘಿ ಸಭೆಯಲ್ಲಿ ಭಾಗಿಯಾಗಿ ಇಷ್ಟುದಿನ ಬೇರೆ ಬೇರೆ ಪ್ರದೇಶಗಳಲ್ಲಿ ಭಾಗಿಯಾಗಿದ್ದ ಇವರು ಇಂದು ಎಲ್ಲರೂ ಇಂದಿರಾ ಗಾಂಧಿ ಇಂಟರ್ನ್ಯಾಷನಲ್ ಏರ್ಪೋರ್ಟ್ನಲ್ಲಿ ಒಟ್ಟಿಗೆ ಸೇರಿ ಪ್ರಯಾಣ ಬೆಳೆಸಲು ಮುಂದಾಗಿದ್ದರು. ಈ ವೇಳೆ, ಪೊಲೀಸರು ಅವರನ್ನ ವಶಕ್ಕೆ ಪಡೆದುಕೊಳ್ಳಲು ಯಶಸ್ವಿಯಾಗಿದ್ದಾರೆ.