ಅಹಮದಾಬಾದ್ (ಗುಜರಾತ್): ಅಹಮದಾಬಾದ್ನ ಕೋವಿಡ್-19 ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಈ ದುರಂತದಲ್ಲಿ 8 ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ನವರಂಗ್ಪುರದ ಶ್ರೇಯ ಆಸ್ಪತ್ರೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ.
ಈ ಮಧ್ಯೆ ಗುಜರಾತ್ನಲ್ಲಿ 1,073 ನೂತನ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಬುಧವಾರ ಸೋಂಕಿತರ ಸಂಖ್ಯೆ 66 ಸಾವಿರದ ಗಡಿ ದಾಟಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ. ಗುಜರಾತ್ನಲ್ಲಿ ಮೃತಪಟ್ಟ ಕೊರೊನಾ ಸೋಂಕಿತರ ಸಂಖ್ಯೆ 2,557 ಕ್ಕೆ ಏರಿಕೆಯಾಗಿದೆ.