ETV Bharat / bharat

ಹೈದರಾಬಾದ್‌ನ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ 80 ಸಿಬ್ಬಂದಿಗೆ ಕೊರೊನಾ! - ಸರ್ದಾರ್ ವಲ್ಲಭಭಾಯಿ ಪಟೇಲ್ ನ್ಯಾಷನಲ್ ಪೋಲಿಸ್ ಅಕಾಡೆಮಿ

ಹೈದರಾಬಾದ್‌ನ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ 80 ಸಿಬ್ಬಂದಿಗೆ ಕೋವಿಡ್-19 ದೃಢಪಟ್ಟಿದೆ. ಸುರಕ್ಷತೆಯ ದೃಷ್ಟಿಯಿಂದ ಅಕಾಡೆಮಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

svpnpa
svpnpa
author img

By

Published : Sep 8, 2020, 11:20 AM IST

ಹೈದರಾಬಾದ್: ಸರ್ದಾರ್ ವಲ್ಲಭಭಾಯ್​​ ಪಟೇಲ್ ನ್ಯಾಷನಲ್ ಪೋಲಿಸ್ ಅಕಾಡೆಮಿಯ (ಎಸ್‌ವಿಪಿಎನ್‌ಪಿಎ) ಆಡಳಿತ ಮತ್ತು ನಿರ್ವಹಣಾ ವಿಭಾಗದ 80 ಸಿಬ್ಬಂದಿಗೆ ಕೋವಿಡ್-19 ದೃಢಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಸ್‌ವಿಪಿಎನ್‌ಪಿಎ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿಗಳ ಪ್ರಧಾನ ತರಬೇತಿ ಸಂಸ್ಥೆಯಾಗಿದೆ. ಕೋವಿಡ್-19 ದೃಢಪಟ್ಟಿರುವ ಸಿಬ್ಬಂದಿ ತರಬೇತಿ ಕರ್ತವ್ಯದಲ್ಲಿ ಭಾಗಿಯಾಗಿರಲಿಲ್ಲ ಎಂದು ಅಕಾಡೆಮಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸುರಕ್ಷತೆಯ ದೃಷ್ಟಿಯಿಂದ ಅಕಾಡೆಮಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಹೊರಗಿನವರಿಗೆ ಅವಕಾಶ ನೀಡಲಾಗುತ್ತಿಲ್ಲ.

"ಪರೀಕ್ಷಾ ಫಲಿತಾಂಶಗಳ ಪ್ರಕಾರ ಐಪಿಎಸ್ ಪ್ರೊಬೇಷನರ್‌ಗಳೊಂದಿಗೆ ಸಂವಹನ ನಡೆಸುತ್ತಿದ್ದ ಯಾವುದೇ ಅಧ್ಯಾಪಕರು / ಬೋಧಕರು ಸೋಂಕಿಗೆ ಒಳಗಾಗಲಿಲ್ಲ. ಎಲ್ಲಾ ಕಾರ್ಯಗಳನ್ನು ನಾವು ಮುಂದೂಡಿದ್ದೇವೆ" ಎಂದು ಅಧಿಕಾರಿ ಹೇಳಿದ್ದಾರೆ.

80 ಸಿಬ್ಬಂದಿಯನ್ನು ಬೇರೆ ಬೇರೆ ಸ್ಥಳಗಳಲ್ಲಿ ಕ್ವಾರಂಟೈನ್​ಗೆ ಒಳಪಡಿಸಲಾಗಿದೆ. ಈ ಹಿಂದೆ ಸೋಂಕಿಗೆ ಒಳಗಾದವರಲ್ಲಿ ಸುಮಾರು 25-30 ಮಂದಿ ಶೀಘ್ರದಲ್ಲಿಯೇ ಚೇತರಿಸಿಕೊಳ್ಳಲಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.