ಪಾಟ್ನಾ: ಸಿಡಿಲು ಬಡಿದು ಬಿಹಾರದಲ್ಲಿ ಒಂದೇ ದಿನ 83 ಜನರು ಸಾವನ್ನಪ್ಪಿರುವ ಘಟನೆ ನಡೆದಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಜನರು ಸಿಡಿಲಿಗೆ ಬಲಿಯಾಗಿದ್ದಾರೆ.
ಬಿಹಾರ ಹಾಗೂ ಉತ್ತರಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಹೀಗಾಗಿ ಸಿಡಿಲಿಗೆ ಒಂದೇ ದಿನ ಬಿಹಾರದ ವಿವಿಧ ಭಾಗಗಳಲ್ಲಿ ಇಷ್ಟೊಂದು ಜನರು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಗೋಪಾಲ್ಗಂಜ್ನಲ್ಲೇ 13 ಮಂದಿ ಸಾವನ್ನಪ್ಪಿದ್ದು, ಮಧುಬನಿಯಲ್ಲಿ 8 ಜನರು ಬಲಿಯಾಗಿದ್ದಾರೆ. ಉಳಿದಂತೆ ಪೂರ್ವ ಚಂಪಾರಣ್ನಲ್ಲಿ 5, ಸಿವಾನ್, ಬಾಗಲ್ಪುರ್ದಲ್ಲಿ ತಲಾ 6 ಮಂದಿ ಸಾವನ್ನಪ್ಪಿದ್ದಾರೆ.
-
बिहार और उत्तर प्रदेश के कुछ जिलों में भारी बारिश और आकाशीय बिजली गिरने से कई लोगों के निधन का दुखद समाचार मिला। राज्य सरकारें तत्परता के साथ राहत कार्यों में जुटी हैं। इस आपदा में जिन लोगों को अपनी जान गंवानी पड़ी है, उनके परिजनों के प्रति मैं अपनी संवेदना प्रकट करता हूं।
— Narendra Modi (@narendramodi) June 25, 2020 " class="align-text-top noRightClick twitterSection" data="
">बिहार और उत्तर प्रदेश के कुछ जिलों में भारी बारिश और आकाशीय बिजली गिरने से कई लोगों के निधन का दुखद समाचार मिला। राज्य सरकारें तत्परता के साथ राहत कार्यों में जुटी हैं। इस आपदा में जिन लोगों को अपनी जान गंवानी पड़ी है, उनके परिजनों के प्रति मैं अपनी संवेदना प्रकट करता हूं।
— Narendra Modi (@narendramodi) June 25, 2020बिहार और उत्तर प्रदेश के कुछ जिलों में भारी बारिश और आकाशीय बिजली गिरने से कई लोगों के निधन का दुखद समाचार मिला। राज्य सरकारें तत्परता के साथ राहत कार्यों में जुटी हैं। इस आपदा में जिन लोगों को अपनी जान गंवानी पड़ी है, उनके परिजनों के प्रति मैं अपनी संवेदना प्रकट करता हूं।
— Narendra Modi (@narendramodi) June 25, 2020
ಸಿಡಿಲು ಬಡಿದು ಸಾವನ್ನಪ್ಪಿರುವವರ ಕುಟುಂಬಗಳಿಗೆ ಸಾಂತ್ವನ ಹೇಳಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್, ಪ್ರತಿ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಉತ್ತರಪ್ರದೇಶದಲ್ಲಿ 24 ಜನರು ಸಿಡಿಲು ಬಡಿದು ಸಾವನ್ನಪ್ಪಿದ್ದಾಗಿ ತಿಳಿದು ಬಂದಿದೆ.
ಪ್ರಧಾನಿ ನರೇಂದ್ರ ಮೋದಿ ಕೂಡ ಸಂತಾಪ ಸೂಚಿಸಿದ್ದು, ಉತ್ತರಪ್ರದೇಶ, ಬಿಹಾರದಲ್ಲಿ ಮಳೆ ಹಾಗೂ ಸಿಡಿಲು ಬಡಿದು ಹಲವು ಮಂದಿ ಜೀವ ಕಳೆದುಕೊಂಡಿದ್ದಾರೆ ಎಂಬ ಸುದ್ದಿ ಗೊತ್ತಾಯಿತು. ರಾಜ್ಯ ಸರ್ಕಾರಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ ಎಂದು ಹೇಳಿದ್ದಾರೆ.