ETV Bharat / bharat

ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ CRPF ನ 9 ಸಿಬ್ಬಂದಿಗೂ ಕೊರೊನಾ ಸೋಂಕು

author img

By

Published : Apr 25, 2020, 9:24 AM IST

ನವದೆಹಲಿಗೆ ಕರ್ತವ್ಯಕ್ಕೆ ನಿಯೋಜನೆಗೊಡಿದ್ದ ಕೇಂದ್ರ ಮೀಸಲು ಪೊಲೀಸ್ ಪಡೆ ಸಿಬ್ಬಂದಿಗೂ ಕೊರೊನಾ ಸೋಂಕು ತಗುಲಿದೆ.

9 CRPF personnel test positive for COVID-19
CRPF ಸಿಬ್ಬಂದಿಗೆ ಕೊರೊನಾ ಸೋಂಕು

ನವದೆಹಲಿ: ರಾಷ್ಟ್ರ ರಾಜಧಾನಿಯಕ್ಕು ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್)ಯ 9 ಮಂದಿ ಸಿಬ್ಬಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ ಎಂದು ಸಿಆರ್‌ಪಿಎಫ್ ಮೂಲಗಳು ತಿಳಿಸಿವೆ.

ನವದೆಹಲಿಯ ನರೇಲಾ ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದ್ದ 47 ಸಿಆರ್​ಪಿಎಫ್​ ಸಿಬ್ಬಂದಿಯಲ್ಲಿ, 9 ಮಂದಿಗೆ ಸೋಂಕು ತಗುಲಿದೆ. ಸದ್ಯ ಸೋಂಕಿತರನ್ನು ಪ್ರತ್ಯೇಕ ವಾರ್ಡ್​ನಲ್ಲಿ ಇರಿಸಲಾಗಿದೆ. ಎಲ್ಲರನ್ನೂ ನವದೆಹಲಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು ಎಂದು ಸಿಆರ್‌ಪಿಎಫ್ ಮೂಲಗಳು ತಿಳಿಸಿವೆ.

ಭಾರತದಲ್ಲಿ ಒಟ್ಟು 24,506 ಪ್ರಕರಣಗಳು ವರದಿಯಾಗಿದ್ದು, 5,063 ಜನರು ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಪ್ರಸ್ತುತ 18,668 ಜನರು ಚಿಕಿತ್ಸೆ ಪಡೆಯುತ್ತಿದ್ದು, 775 ಜನರು ಕೊರೊನಾ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.