ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಾಯುಮಾಲಿನ್ಯದ ವಿರುದ್ಧ ಲಿಸಿಪ್ರಿಯಾ ಕಂಗುಜಮ್ ಎಂಬ 9 ವರ್ಷದ ಬಾಲಕಿ ವಿಜಯ್ ಚೌಕ್ ಪ್ರದೇಶದಲ್ಲಿ ಪ್ರತಿಭಟನೆ ನಡೆಸಿದಳು.
ಈ ಹಿಂದೆ ಸ್ಪೇನ್‌ನ ಮ್ಯಾಡ್ರಿಡ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಹವಾಮಾನ ಸಮ್ಮೇಳನ 2019 (ಸಿಒಪಿ 25) ಅನ್ನು ಉದ್ದೇಶಿಸಿ ಮಾತನಾಡಿದ ಈಕೆ, 'ನಮ್ಮ ನಾಯಕರು ವಾಯುಮಾಲಿನ್ಯದ ವಿರುದ್ಧ ಹೋರಾಡಲು ಕ್ರಮ ತೆಗೆದುಕೊಳ್ಳಬೇಕೆಂದು ನಾನು ಬಯಸುತ್ತೇನೆ. ಅವರು ಪರಿಹಾರವನ್ನು ಕಂಡುಕೊಳ್ಳುವ ಬದಲು ಪರಸ್ಪರ ದೂಷಿಸುವಲ್ಲಿ ನಿರತರಾಗಿದ್ದಾರೆ. ವಾಯುಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳಲ್ಲದೆ ಹರಿಯಾಣ ಮತ್ತು ಪಂಜಾಬ್‌ನಲ್ಲಿ ಕಸವನ್ನು ಸುಡುವುದು ಸಹ ವಾಯುಮಾಲಿನ್ಯಕ್ಕೆ ಕಾರಣವಾಗಿದೆ' ಎಂದು ತಿಳಿಸಿದ್ದಳು.
ಈ ಬಾಲಕಿಯು ಕೈಯಲ್ಲಿ ಬ್ಯಾನರ್ ಹಿಡಿದು ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾಳೆ.