ಕೊಲ್ಲಂ : ಹಾವು ಕಚ್ಚಿ 10 ವರ್ಷದ ಬಾಲಕಿ ಮೃತಪಟ್ಟ ಘಟನೆ ಇಲ್ಲಿನ ಪತ್ತಾನಪುರಂನಲ್ಲಿ ನಡೆದಿದೆ.
ಪತ್ತಾನಪುರಂ ನಿವಾಸಿಗಳಾದ ರಾಜೀವ್ ಮತ್ತು ಸಿಂಧು ದಂಪತಿಯ ಪುತ್ರಿ ಆದಿತ್ಯ ಮೃತ ಬಾಲಕಿ. ಈಕೆ ಮನ್ಕೋಡ್ನ ಶಾಲೆಯಲ್ಲಿ ಐದನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು.
ಶನಿವಾರ ಮುಂಜಾನೆ ಈ ದುರ್ಘಟನೆ ನಡೆದಿದ್ದು, ಮೃತ ಆದಿತ್ಯ ಪೋಷಕರೊಂದಿಗೆ ಮಲಗಿದ್ದಾಗ ಹಾವು ಕಚ್ಚಿದೆ. ತಕ್ಷಣ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಾಲಕಿಗೆ ಪ್ರಥಮ ಚಿಕಿತ್ಸೆ ಕೊಡಿಸಿದ ಪೋಷಕರು, ಬಳಿಕ ತಾಲೂಕು ಆಸ್ಪತ್ರೆಗೆ ಕರೆದೊಯ್ದಿದ್ದರು. ಬಳಿಕ ಬಾಲಕಿ ಸ್ಥಿತಿ ಗಂಭೀರವಾಗಿದ್ದರಿಂದ ಆಕೆಯನ್ನು ತಿರುವಲ್ಲಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆಲ್ಲಿ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.