ಪೂಂಚ್ (ಜಮ್ಮುಕಾಶ್ಮೀರ) : ಗಡಿಯಲ್ಲಿ ಪಾಕ್ ಪದೇಪದೆ ಕದನ ವಿರಾಮ ಉಲ್ಲಂಘಿಸುತ್ತಿದೆ. ಪೂಂಚ್ ಜಿಲ್ಲೆಯಲ್ಲಿ ಮೆಂಧರ್ ಸೆಕ್ಟರ್ನಲ್ಲಿ ನಾಗರಿಕರನ್ನು ಗುರಿಯಾಗಿಸಿ ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಭಾರತೀಯ ಸೇನೆಯೂ ತಕ್ಕ ಪ್ರತ್ಯುತ್ತರ ನೀಡಿದೆ.
ಉಭಯ ರಾಷ್ಟ್ರಗಳ ಗುಂಡಿನ ಚಕಮಕಿ ವೇಳೆ 12 ವರ್ಷದ ಬಾಲಕ ಜಹಾಂಗೀರ್ ಅಹ್ಮದ್ಗೆ ಗಂಭೀರ ಗಾಯಗಳಾಗಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗಾಯಾಳು ಬಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.