ಹೈದರಾಬಾದ್ : ನಲ್ಗೊಂಡ ಜಿಲ್ಲೆಯ ಅಂಗಡಿಪೇಟೆಯ ಪೆಡ್ಡಾದಿಸರ್ಲಾಪಲ್ಲಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ.
ಕಾರ್ಮಿಕರ ಆಟೋಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 8 ಜನರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇನ್ನುಳಿದಂತೆ 10 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗಾಯಗೊಂಡವರ ಸ್ಥಿತಿ ಗಂಭೀರವಾದ್ದರಿಂದ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.