ಗುರುಗ್ರಾಮ(ಹರಿಯಾಣ): ಬಿಜೆಪಿ ಶಾಸಕ ಉಮೇಶ್ ಅಗರ್ವಾಲ್ರನ್ನು ಬ್ಲ್ಯಾಕ್‌ಮೇಲ್ ಮಾಡಿದ ಆರೋಪದ ಮೇಲೆ ಪತ್ರಕರ್ತ ವಿಜಯ್ ಶುಕ್ಲಾರನ್ನು ಪೊಲೀಸರು ಬಂಧಿಸಿದ್ದಾರೆ.
ಒಂದು ತಿಂಗಳಿಂದ ದೂರವಾಣಿ ಕರೆ ಮಾಡಿ 3 ಕೋಟಿ ಬೇಡಿಕೆ ಇಟ್ಟಿದ್ದರು ಎಂದು ಶಾಸಕ ಉಮೇಶ್ ಅಗರ್ವಾಲ್ ಪೊಲೀಸರಿಗೆ ದೂರನ್ನು ನೀಡಿದ್ದಾರೆ.
ವಿಜಯ್ ಶುಕ್ಲಾ ಪತ್ರಿಕೆಯೊಂದರ ಮಾಲೀಕರಾಗಿದ್ದು, ಈ ಪ್ರಕರಣದಲ್ಲಿ ಇನ್ನೂ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಶುಕ್ಲಾರನ್ನು ಬುಧವಾರ ಬಂಧಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.