ಆಂಧ್ರಪ್ರದೇಶ: ನಾಲ್ಕೂವರೆ ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ 17 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಈ ಘಟನೆಯೂ ಜನವರಿ 6 ರಂದು ಕೃಷ್ಣ ಜಿಲ್ಲೆಯ ವೆಲ್ಲಾಟೂರು ಗ್ರಾಮದ ಜಿ ಕೊಂಡೂರು ಮಂಡಲ್ನಲ್ಲಿ ನಡೆದಿದೆ.
ಮನೆಯಲ್ಲಿ ತಂದೆ-ತಾಯಿ ಯಾರು ಇಲ್ಲದಿರುವುದನ್ನು ಗಮನಿಸಿದ ಅಪರಾಧಿ, ಬಾಲಕಿ ಆಟವಾಡುತ್ತಿದ್ದಾಗ ಚಾಕೋಲೇಟ್ ಕೊಡಿಸುವುದಾಗಿ ಆಸೆ ತೋರಿಸಿದ್ದಾನೆ. ಬಳಿಕ ಆಕೆಯನ್ನು ಕರೆ ತಂದು ಅತ್ಯಾಚಾರವೆಸಗಿದ್ದಾನೆ ಎಂದು ಕೊಂಡೂರು ಪೊಲೀಸರು ಹೇಳಿದ್ದಾರೆ.
ಸುದ್ದಿ ತಿಳಿದ ಬಳಿಕ ಬಾಲಕಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಎಫ್ಐಆರ್ ಹಾಕಿ ಆರೋಪಿಯನ್ನು ಮಂಗಳವಾರ ಬಂಧಿಸಿ, ಕೋರ್ಟ್ಗೆ ಹಾಜರು ಪಡಿಸಿದ್ದಾರೆ.