ವಡೋದರ(ಗುಜರಾತ್): ಯುಪಿಯಿಂದ ವಲಸೆ ಕಾರ್ಮಿಕರನ್ನು ಹೊತ್ತು ಬರುತ್ತಿದ್ದ ಖಾಸಗಿ ಬಸ್ ಗೋಧ್ರಾ ಬಳಿ ಅಪಘಾತಕ್ಕೀಡಾಗಿದ್ದು, ಬಸ್ನಲ್ಲಿದ್ದ ಎಲ್ಲರೂ ಗಾಯಗೊಂಡಿದ್ದಾರೆ.
35 ಜನರಿಗೆ ಸಾಮಾನ್ಯ ಗಾಯಗಳಾಗಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಎಲ್ಲರನ್ನೂ ವಡೋದರಾದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ ಎನ್ನಲಾಗುತ್ತಿದೆ. ಈ ಬಸ್ ಯುಪಿಯಿಂದ ಸೂರತ್‌ಗೆ ತೆರಳುತ್ತಿತ್ತು.
ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ..