ಆಂಧ್ರಪ್ರದೇಶ: ಕೈದಿಯೊಬ್ಬರಿಗೆ ಸರ್ಕಾರಿ ಕೆಲಸಕ್ಕೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದ್ದು, ಪೊಲೀಸ್ ಭದ್ರತೆಯಲ್ಲಿ ಆತ ಪರೀಕ್ಷೆ ಬರೆದಿದ್ದಾನೆ.
ಶಿವಕುಮಾರ್ ಎಂಬುವರು ತಾವು ಪ್ರಕರಣವೊಂದರಲ್ಲಿ ಬಂಧನಕ್ಕೊಳಗಾಗುವ ಮುನ್ನ ಸರ್ಕಾರಿ ಕೆಲಸಕ್ಕೆ ಅರ್ಜಿ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರ ಅನುಮತಿ ಪಡೆದು ಪರೀಕ್ಷೆ ಬರೆದಿದ್ದಾರೆ.
ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಪಲಾಸಾ ಸರ್ಕಾರಿ ಶಾಲೆಯಲ್ಲಿನ ಪರೀಕ್ಷಾ ಕೇಂದ್ರದಲ್ಲಿ ಪೊಲೀಸರ ಭದ್ರತೆಯಲ್ಲಿ ಆಗಮಿಸಿ ಪರೀಕ್ಷೆ ಬರೆದು ಮತ್ತೇ ಕಾರಾಗೃಹಕ್ಕೆ ಹಿಂತಿರುಗಿದ್ದಾರೆ.