ತೆಲಂಗಾಣ : ಪಾಪಿ ತಂದೆ ತನ್ನ ಇಬ್ಬರು ಮಕ್ಕಳನ್ನು ಕೊಲ್ಲಲು ಯತ್ನಿಸಿದ ಅಮಾನವೀಯ ಘಟನೆ ಸಿದ್ದಿಪೇಟೆ ಜಿಲ್ಲೆಯ ಚಿತ್ತಾಪುರ ಗ್ರಾಮದ ದುಬ್ಬಕಾ ಮಂಡಲದಲ್ಲಿ ನಡೆದಿದೆ.
ಮೊಹಮ್ಮದ್ ಎಂಬಾತ ತನ್ನಿಬ್ಬರು ಹೆಣ್ಣುಮಕ್ಕಳನ್ನು ಹತ್ಯೆ ಮಾಡಲು ಯತ್ನಿಸುತ್ತಿದ್ದಂತೆ ಜೋರಾಗಿ ಕಿರುಚಾಡಿದ್ದಾರೆ. ಕಿರುಚಾಟ ಕೇಳಿ ಸ್ಥಳಕ್ಕೆ ದೌಡಾಯಿಸಿದ ನೆರೆ ಮನೆಯವರು ಮಕ್ಕಳನ್ನು ರಕ್ಷಿಸಿ, ಆಸ್ಪತ್ರೆಗೆ ಸೇರಿಸಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಮುಂದುವರಿಯುತ್ತಿದೆ.
ಸದ್ಯ ಆರೋಪಿ ಮೊಹಮ್ಮದ್ನನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆಗೆ ಒಳಪಡಿಸಿದ್ದಾರೆ.