ETV Bharat / bharat

ಮುಂಬೈ -  ಪುಣೆ ಎಕ್ಸ್​ಪ್ರೆಸ್​ ವೇನಲ್ಲಿ ಭೀಕರ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ - ಮುಂಬೈನಲ್ಲಿ ಭೀಕರ ರಸ್ತೆ ಅಪಘಾತ

ಬೃಹತ್​ ಕಂಟೇನರ್​ ಒಂದು ಮುಂಬೈನಿಂದ ಮಾಂಸ ಸಾಗಾಟ ಮಾಡುತ್ತಿದ್ದ ಲಾರಿಗೆ ಮೊದಲು ಡಿಕ್ಕಿ ಹೊಡೆದಿದೆ, ಬಳಿಕ ಮತ್ತೆರಡು ಕಾರುಗಳಿಗೂ ಡಿಕ್ಕಿ ಹೊಡೆದಿದೆ. ಪರಿಣಾಮ ಕಂಟೇನರ್​ ಮತ್ತು ಲಾರಿ ಪಲ್ಟಿಯಾಗಿ ಬಿದ್ದಿದ್ದು, ಎರಡು ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿವೆ.

A terrible accident in Mumbai-Pune Express way
ಮುಂಬೈ- ಪುಣೆ ಎಕ್ಸ್​ಪ್ರೆಸ್​ ವೇಯಲ್ಲಿ ಭೀಕರ ಅಪಘಾತ:
author img

By

Published : Jun 29, 2020, 11:25 AM IST

ಮುಂಬೈ : ನಾಲ್ಕು ವಾಹನಗಳ ಮಧ್ಯೆ ಪರಸ್ಪರ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಇನ್ನು ಕೆಲವರು ಗಾಯಗೊಂಡ ಭೀಕರ ಘಟನೆ ಮುಂಬೈ-ಪುಣೆ ಎಕ್ಸ್‌ಪ್ರೆಸ್ ವೇಯ ಖೋಪೋಲಿ ಬಳಿಯ ಬೋರ್ಘಾಟ್‌ನಲ್ಲಿ ನಡೆದಿದೆ.

ಬೃಹತ್​ ಕಂಟೇನರ್​ ಒಂದು ಮುಂಬೈನಿಂದ ಮಾಂಸ ಸಾಗಾಟ ಮಾಡುತ್ತಿದ್ದ ಲಾರಿಗೆ ಮೊದಲು ಡಿಕ್ಕಿ ಹೊಡೆದಿದೆ, ಬಳಿಕ ಮತ್ತೆರಡು ಕಾರುಗಳಿಗೂ ಡಿಕ್ಕಿ ಹೊಡೆದಿದೆ. ಪರಿಣಾಮ ಕಂಟೇನರ್​ ಮತ್ತು ಲಾರಿ ಪಲ್ಟಿಯಾಗಿ ಬಿದ್ದಿದ್ದು, ಎರಡು ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿವೆ.

ಮುಂಬೈ- ಪುಣೆ ಎಕ್ಸ್​ಪ್ರೆಸ್​ ವೇಯಲ್ಲಿ ಭೀಕರ ಅಪಘಾತ

ಅಪಘಾತದಿಂದ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬಂದ ಖೋಪೋಲಿ ಪೊಲೀಸರು ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಕಾರ್ಯ ಮಾಡಿದ್ದಾರೆ.

ಲಾಕ್ ಡೌನ್ ಅವಧಿಯಲ್ಲಿ ಈ ಹೆದ್ದಾರಿಯಲ್ಲಿ ವಾಹನ ದಟ್ಟಣೆ ಕಡಿಮೆಯಿದ್ದರಿಂದ ಅಪಘಾತಗಳ ಸಂಖ್ಯೆಯೂ ಕಡಿಮೆಯಾಗಿತ್ತು. ಲಾಕ್ ಡೌನ್ ಸಡಿಲಿಕೆಯಾದ ಬಳಿಕ ಮತ್ತೆ ಅಪಘಾತಗಳು ಸಂಭವಿಸುತ್ತಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.