ವಾರ್ದಾ(ಮಹಾರಾಷ್ಟ್ರ): ಕಾಲೇಜ್ನಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಯುವತಿಯೋರ್ವಳ ಮೇಲೆ ದುಷ್ಕರ್ಮಿಯೋರ್ವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಮಹಾರಾಷ್ಟ್ರದ ವಾರ್ದಾದಲ್ಲಿ ನಡೆದಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ.
ಈ ಹಿಂದೆ ಇವರಿಬ್ಬರೂ ಪ್ರೀತಿಸುತ್ತಿದ್ದರಂತೆ. ಇದೀಗ ಆಕೆಯ ಬಳಿ ಮದುವೆ ಪ್ರಸ್ತಾಪ ಮಾಡುತ್ತಿದ್ದಂತೆ ನಿರಾಕರಿಸಿದ್ದರಿಂದ ಆಕ್ರೋಶಗೊಂಡು ಆತ ಈ ಕೃತ್ಯವೆಸಗಿದ್ದಾನೆ ಎಂದು ತಿಳಿದು ಬಂದಿದೆ. ಆಕೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುತ್ತಿದ್ದಂತೆ ವಾರ್ದಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಪರಿಸ್ಥಿತಿ ಗಂಭೀರವಾಗಿರುವ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ನಾಗ್ಪುರ್ಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.