ಹೈದಾರಾಬಾದ್: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ತಂಗಡಪಲ್ಲಿ ಎಂಬಲ್ಲಿ ನಗ್ನ ರೂಪದಲ್ಲಿ ಯುವತಿಯೊಬ್ಬಳ ಮೃತದೇಹ ಪತ್ತೆಯಾಗಿದ್ದು, ಅತ್ಯಾಚಾರವೆಸಗಿ ಕೊಂದಿರುವ ಶಂಕೆ ವ್ಯಕ್ತವಾಗಿದೆ.
ವಸ್ತ್ರ ರಹಿತವಾಗಿ ಯುವತಿಯ ಮೃತದೇಹ ಪತ್ತೆಯಾದ ಹಿನ್ನೆಲೆ ಅತ್ಯಾಚಾರ ನಡೆದಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸಿಪಿ ರವೀಂದರ್ ರೆಡ್ಡಿ, ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಇದಕ್ಕಾಗಿ ಪ್ರತ್ಯೇಕ ತನಿಖಾ ತಂಡವನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.