ಟೋಂಕ್( ರಾಜಸ್ಥಾನ): ಭೀಕರ ರಸ್ತೆ ಅಪಘಾತದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ. ಶೇಖಾವತಿಯ ಸಿಕಾರ್ ಜಿಲ್ಲೆಯಲ್ಲಿರುವ ಖತುಷ್ಯಂ ಜಿ ಯಿಂದ ವಾಪಸಾಗುತ್ತಿದ್ದ ವೇಳೆ ರಸ್ತೆ ಅಪಘಾತ ಸಂಭವಿಸಿದೆ.
ಪ್ರವಾಸಿಗರ ಜೀಪ್ ಟ್ರೇಲರ್ಗೆ ಡಿಕ್ಕಿ ಹೊಡೆದಿದ್ದು, ಎಂಟು ಜನ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಅನೇಕ ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಪಘಾತಕ್ಕೆ ಒಳಗಾದವರು ಮಧ್ಯಪ್ರದೇಶ ಮೂಲದ ಒಂದೇ ಕುಟುಂಬದವರು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಲಾಲ್ ಕ್ವಿಲಾ ಮೆಟ್ರೋ ನಿಲ್ದಾಣದ ಪ್ರವೇಶ ದ್ವಾರ ಬಂದ್: ನಿರ್ಗಮನಕ್ಕೆ ಮಾತ್ರ ಅನುಮತಿ
ಎನ್‌ಎಚ್ -12 ರಲ್ಲಿ ಬನಾಸ್ ಸೇತುವೆ ಬಳಿ ಅಪಘಾತ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕಾಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.