ಸತಾರಾ: ಬೆಳ್ಳಂ ಬೆಳಗ್ಗೆ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರು ಸಾವನ್ನಪ್ಪಿದ್ದಾರೆ.
ಮುಂಬೈಯಿಂದ ಗೋವಾಗೆ ಹೋಗುತ್ತಿದ್ದ ಮಿನಿ ಬಸ್, ನದಿ ಸೇತುವೆಗೆ ಡಿಕ್ಕಿ ಹೊಡೆದು 50 ಅಡಿ ಕೆಳಗೆ ಮಿನಿ ಬಸ್ ಬಿದ್ದಿದೆ. ಘಟನೆಯಲ್ಲಿ ಮೂವರು ಪುರುಷರು, ಮಹಿಳೆ ಮತ್ತು ಮೂರು ವರ್ಷದ ಮಗು ಸೇರಿ ಐವರು ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸತಾರಾ ಜಿಲ್ಲೆಯ ಕರಾದ್ ಪಟ್ಟಣದ ಬಳಿ ಈ ಅಪಘಾತ ಸಂಭವಿಸಿದೆ.