ETV Bharat / bharat

ಲಾರಿ-ಟ್ಯಾಕ್ಸಿ ನಡುವೆ ಭೀಕರ ಅಪಘಾತ: ಮಗು ಸೇರಿ 8 ಮಂದಿ ದುರ್ಮರಣ - ಅಪರಾಧ ಸುದ್ದಿ

ಝಾನ್ಸಿ ಜಿಲ್ಲೆಯಲ್ಲಿ ಟ್ಯಾಕ್ಸಿ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಒಂದೂವರೆ ವರ್ಷದ ಮಗು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದಾರೆ.

accident-news
author img

By

Published : Oct 6, 2019, 11:15 PM IST

ಝಾನ್ಸಿ (ಉತ್ತರ ಪ್ರದೇಶ): ಜಿಲ್ಲೆಯ ತೋಡಿಫ್ತೇಪುರ್​​ನಲ್ಲಿ ಟ್ಯಾಕ್ಸಿ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೂವರೆ ವರ್ಷದ ಮಗು ಸೇರಿದಂತೆ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನೂ 6ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಮೌರಾನಿಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಿಲ್ಲೆಯ ಪಾಂಡ್ವಹಾ ಗ್ರಾಮದ ಖೈರಿ ಖುರೊಡಾ ಕಡೆಗೆ ಟ್ಯಾಕ್ಸಿ ಹೋಗುತ್ತಿತ್ತು. ಅದೇ ವೇಳೆ ಗುರಸರಾಣಿ-ಮೌರಾನಿಪುರ ರಸ್ತೆಯ ರಾಜ್‌ಪುರ ಬಳಿ ಟ್ಯಾಕ್ಸಿಗೆ ಲಾರಿ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಟ್ಯಾಕ್ಸಿಯಲ್ಲಿದ್ದ ಒಂದೂವರೆ ವರ್ಷದ ಮಗು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದಾರೆ.

ಮೃತಪಟ್ಟವರಲ್ಲಿ ನಾಲ್ವರು ಮಹಿಳೆಯರು, ಮೂವರು ಪುರುಷರು ಮತ್ತು ಹೆಣ್ಣು ಮಗುವೊಂದಿದೆ. ಘಟನೆ ನಡೆದ ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಗಾಯಾಳುಗಳನ್ನು ಕಾರಿನಿಂದ ಹೊರಗೆ ತೆಗೆದು ಆರೋಗ್ಯ ಕೇಂದ್ರಕ್ಕೆ ರವಾನಿಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ತೋಡಿಫ್ತೇಪುರ್​​ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Intro:Body:Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.