ನವದೆಹಲಿ: ರಾಜಧಾನಿಯ ದಿಢೀರ್ ರಾಜಕೀಯ ಬೆಳವಣಿಗೆವೊಂದರಲ್ಲಿ ದೆಹಲಿಯ ಬಿಜೆಪಿಗೆ ನೂತನ ಅಧ್ಯಕ್ಷರಾಗಿ ಆದೇಶ್ ಕುಮಾರ್ ಗುಪ್ತಾ ನೇಮಕವಾಗಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಆದೇಶ್ ಕುಮಾರ್ ಗುಪ್ತಾ, ಪಕ್ಷದ ನಿಷ್ಠಾವಂತ ಕಾರ್ಯಕರ್ತನನ್ನು ಬಿಜೆಪಿ ಅಧ್ಯಕ್ಷರಾಗಿ ನೇಮಕ ಮಾಡಿದ್ದಕ್ಕಾಗಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಬಿಜೆಪಿಯ ಹಿರಿಯ ನಾಯಕರಿಗೆ ಧನ್ಯವಾದ ತಿಳಿಸಿದ್ದಾರೆ. ಜೊತೆಗೆ ಕೋವಿಡ್ -19 ಬಿಕ್ಕಟ್ಟಿನ ಸಂದರ್ಭದಲ್ಲಿ ಪಕ್ಷವನ್ನು ಕ್ರೋಢೀಕರಿಸುವುದು ಮತ್ತು ವಿಸ್ತರಿಸುವುದು ನನಗೆ ದೊಡ್ಡ ಸವಾಲಾಗಿದೆ ಎಂದಿದ್ದಾರೆ.