ಕುಶಲ್ಗಢ್: ತಂದೆಯೊಬ್ಬ ತನ್ನ ಮುದ್ದಾದ ನಾಲ್ಕು ಮಕ್ಕಳನ್ನು ಕೊಂದು ಬಳಿಕ ತಾನೂ ನೇಣಿಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಡುಂಗ್ಲಾಪಾನಿ ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ನಿವಾಸಿ ಕಸೂ ಕಲಾರಾ ಐದು ವರ್ಷದೊಳಗಿನ ತನ್ನ ನಾಲ್ಕು ಮಕ್ಕಳನ್ನು ಕೊಲೆ ಮಾಡಿದ್ದಾನೆ. ಬಳಿಕ ಮನೆಯ ಹೊರವಲಯದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸ್ಥಳೀಯರು ಮರಕ್ಕೆ ನೇತಾಡುತ್ತಿದ್ದ ಕಸೂ ಕಲಾರಾ ಮೃತ ದೇಹವನ್ನು ನೋಡಿ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದರು. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ತಂಡ ಮನೆಯೊಳಗೆ ನೋಡಿದಾಗ ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಮಕ್ಕಳನ್ನು ಯಾವ ರೀತಿ ಕೊಲೆ ಮಾಡಲಾಗಿದೆ. ಯಾವ ಘಟನೆಗೆ ಕಸೂ ಕಲಾರಾ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ಪೊಲೀಸ್ ತನಿಖೆ ಬಳಿಕವೇ ತಿಳಿದು ಬರಲಿದೆ ಎಂದು ಪೊಲೀಸ್ ಅಧಿಕಾರಿ ಪ್ರದೀಪ್ ಕುಮಾರ್ ಹೇಳಿದ್ದಾರೆ.
ಈ ಘಟನೆ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.