ನವದೆಹಲಿ:ಅಮೆರಿಕ ಪ್ರವಾಸದಿಂದ ಮರಳಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಮನ್ ಕಿ ಬಾತ್ (ಮನದ ಮಾತು) ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ.
ಮೋದಿಯವರು ಎರಡನೇ ಅವಧಿಗೆ ಪ್ರಧಾನಿಯಾದ ಬಳಿಕ ನಡೆಯುತ್ತಿರುವ ನಾಲ್ಕನೇ ಮನ್ ಕಿ ಬಾತ್ ಇದಾಗಿದೆ. ಈ ಹಿಂದಿನ ಮನ್ ಕಿ ಬಾತ್ನಲ್ಲಿ ಪ್ರಧಾನಿ ಅಕ್ಟೋಬರ್ 2ರ ಗಾಂಧಿ ಜಯಂತಿಯ ದಿನದಿಂದ ದೇಶದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧಿಸುವ ಬಗ್ಗೆ ಮಾತನಾಡಿದ್ದರು. ಅಲ್ಲದೆ ಇದೇ ವಿಚಾರವನ್ನು ವಿಶ್ವಸಂಸ್ಥೆಯಲ್ಲೂ ತಮ್ಮ ಭಾಷಣದಲ್ಲಿ ಅವರು ಪ್ರಸ್ತಾಪಿಸಿದ್ದರು.
ಇಂದಿನ ಮನ್ ಕಿ ಬಾತ್ನಲ್ಲಿ ಮೋದಿ ಯಾವ ವಿಷಯದ ಬಗ್ಗೆ ಮಾತನಾಡಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲಿದೆ. ಕಾರ್ಯಕ್ರಮವು ಬೆಳಗ್ಗೆ 11ಗಂಟೆಯಿಂದ ಆರಂಭಗೊಳ್ಳಲಿದೆ. ಆಲ್ ಇಂಡಿಯಾ ರೇಡಿಯೋ, ಡಿಡಿ ನ್ಯಾಷನಲ್, ಡಿಡಿ ನ್ಯೂಸ್ ಮತ್ತು ಡಿಡಿ ಭಾರತಿಯಲ್ಲಿ ಮನ್ ಕಿ ಬಾತ್ ಪ್ರಸಾರವಾಗಲಿದೆ.