ಅಲಿಗಢ(ಉತ್ತರಪ್ರದೇಶ): ಸಲಿಂಗಕಾಮ ಸಂಬಂಧ ಹೊಂದಿದ್ದ ಮಹಿಳೆ ತನ್ನ ಸಹೋದರಿ ಜತೆ ಸೇರಿ ಗಂಡನ ಕೊಲೆ ಮಾಡಿರುವ ಘಟನೆ ಉತ್ತರಪ್ರದೇಶದ ಅಲಿಗಢದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರೋಪಿಗಳನ್ನು ಬಂಧನ ಮಾಡಲಾಗಿದೆ.
ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಹಿಳೆ ಮನೆ ಮಾಲಕಿ ಜತೆ ಸಲಿಂಗಕಾಮ ಸಂಬಂಧ ಹೊಂದಿದ್ದಳಂತೆ. ಇದು ಆತನ ಗಂಡನಿಗೆ ಗೊತ್ತಾದರೆ ತೊಂದರೆಯಾಗುತ್ತದೆ ಎಂಬ ಉದ್ದೇಶದಿಂದ ಹೋಳಿ ಹಬ್ಬದ ದಿನವೇ ಆತನ ಕೊಲೆ ಮಾಡಿದ್ದಾರೆ. ಮೃತ ವ್ಯಕ್ತಿಯ ಸಹೋದರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈಗಾಗಲೇ ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಬುಧವಾರ ರಾತ್ರಿ ಚರಂಡಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಬಳಿಕ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದ್ದು, ಕತ್ತು ಹಿಸುಕಿ ಕೊಲೆ ಮಾಡಿರುವುದು ಬಹಿರಂಗಗೊಂಡಿದೆ. ಮೃತ ವ್ಯಕ್ತಿಯನ್ನ ಭೂರಿ ಸಿಂಗ್ ಎಂದು ಗುರುತಿಸಲಾಗಿದೆ. ಆತ ಪತ್ನಿ ಜತೆ ಉಳಿದುಕೊಂಡಿದ್ದ ಬಾಡಿಗೆ ಮನೆಯಲ್ಲಿನ ಮಾಲಕಿ ರಜನಿ ಜತೆ ಆತನ ಪತ್ನಿ ರೂಬಿ ಸಲಿಂಗಕಾಮ ಸಂಬಂಧ ಹೊಂದಿದ್ದಳಂತೆ. ಈ ಕಾರಣದಿಂದಾಗಿ ಗಂಡನ ಕೊಲೆ ಮಾಡಿದ್ದಾಗಿ ತಪ್ಪು ಒಪ್ಪಿಕೊಂಡಿದ್ದಾಳೆ.
ಕೊಲೆ ಪ್ರಕಣಕ್ಕೆ ಸಂಬಂಧಿಸಿದಂತೆ ಐವರ ವಿರುದ್ಧ ದೂರು ದಾಖಲಾಗಿದ್ದು, ಪತ್ನಿ, ಈಕೆಯ ಸಹೋದರಿ, ಮನೆ ಮಾಲಕಿ ಹಾಗೂ ಮತ್ತಿಬ್ಬರು ಪ್ರಕರಣದಲ್ಲಿ ಭಾಗಿಯಾಗಿದ್ದು, ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.