ನವದೆಹಲಿ: ಭಯೋತ್ಪಾದನಾ ವಿರೋಧಿ ದಿನಾಚರಣೆಯ ಸಂದರ್ಭದಲ್ಲಿ, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಭಯೋತ್ಪಾದನೆಯಿಂದ ದೇಶವನ್ನು ರಕ್ಷಿಸಲು ಪ್ರಾಣ ತ್ಯಾಗ ಮಾಡಿದವರಿಗೆ ಗೌರವ ಸಲ್ಲಿಸಿದ್ದಾರೆ.
"ಭಯೋತ್ಪಾದನಾ ವಿರೋಧಿ ದಿನದಂದು, ಭಯೋತ್ಪಾದನೆಯಿಂದ ಮಾತೃಭೂಮಿಯನ್ನು ರಕ್ಷಿಸಲು ಪ್ರಾಣ ತ್ಯಾಗ ಮಾಡಿದ ಎಲ್ಲಾ ಧೈರ್ಯಶಾಲಿಗಳಿಗೆ ನನ್ನ ಗೌರವವನ್ನು ಅರ್ಪಿಸುತ್ತೇನೆ" ಎಂದು ನಾಯ್ಡು ಟ್ವೀಟ್ ಮಾಡಿದ್ದಾರೆ.
ಭಯೋತ್ಪಾದನೆ ವಿರುದ್ಧದ ಹೋರಾಟವು ಕೇವಲ ಭದ್ರತಾ ಪಡೆಗಳ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.
"ಭಯೋತ್ಪಾದನೆ ಮಾನವೀಯತೆಯ ಶತ್ರುವಾಗಿದೆ. ಭಯೋತ್ಪಾದನೆಯನ್ನು ಯಾವುದೇ ರೂಪದಲ್ಲಿ ಬೆಂಬಲಿಸುವ ರಾಷ್ಟ್ರಗಳನ್ನು ಪ್ರತ್ಯೇಕಿಸಲು ಎಲ್ಲಾ ದೇಶಗಳು ಒಗ್ಗೂಡಬೇಕು. ಭಯೋತ್ಪಾದನೆಯನ್ನು ಸೋಲಿಸಲು ಭಾರತೀಯರೆಲ್ಲರೂ ಒಗ್ಗಟ್ಟಿನಿಂದ ಇರಬೇಕು" ಎಂದು ಅವರು ಟ್ವೀಟ್ ಮಾಡಿದ್ದಾರೆ.