ETV Bharat / bharat

ಕೊರೊನಾ ಭೀತಿಯಲ್ಲಿ ಜಮ್ಮು-ಕಾಶ್ಮೀರ: ಮಾ. 31ರವರೆಗೆ ಶಾಲೆಗಳು ಬಂದ್​​​

ರಾಜ್ಯದಲ್ಲಿ ಎರಡು ಕೊರೊನಾ ಪ್ರಕರಣಗಳು ವರದಿಯಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಜಮ್ಮು ಮತ್ತು ಕಾಶ್ಮೀರ ಸರ್ಕಾರ, ಮಾರ್ಚ್ 31ರವರೆಗೆ ಪ್ರಾಥಮಿಕ ಶಾಲೆಗಳನ್ನು ತೆರೆಯದಂತೆ ಸೂಚಿಸಿದೆ.

author img

By

Published : Mar 7, 2020, 9:08 PM IST

Corona virus scare
ಕೊರೊನಾ ಭೀತಿಯಲ್ಲಿ ಜಮ್ಮು-ಕಾಶ್ಮೀರ

ಜಮ್ಮು-ಕಾಶ್ಮೀರ: ವಿಶ್ವದಾದ್ಯಂತ ಭೀತಿ ಹುಟ್ಟಿಸಿರುವ ಮಹಾಮಾರಿ ಕೊರೊನಾ ವೈರಸ್​ ಸೋಂಕಿತರ ಸಂಖ್ಯೆ ಭಾರತದಲ್ಲಿ 35ಕ್ಕೆ ಏರುತ್ತಿದ್ದಂತೆಯೇ ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.

ಮಾರ್ಚ್ 31ರವರೆಗೆ ಜಮ್ಮು ಹಾಗೂ ಸಾಂಬಾ ಜಿಲ್ಲೆಗಳಲ್ಲಿನ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ ಶಾಲೆಗಳಿಗೆ, ಪ್ರಾಥಮಿಕ ಶಿಕ್ಷಣ ನಿರ್ದೇಶನಾಲಯ ರಜೆ ಘೋಷಣೆ ಮಾಡಿದೆ.

ಜಮ್ಮುವಿನಿಂದ ಇಟಲಿ ಹಾಗೂ ದಕ್ಷಿಣ ಕೊರಿಯಾಗೆ ಪ್ರಯಾಣ ಬೆಳೆಸಿ, ಹಿಂದಿರುಗಿರುವ ಇಬ್ಬರು ವ್ಯಕ್ತಿಗಳಿಗೆ ಕೊರೊನಾ ವೈರಸ್​ ಸೋಂಕು ತಗುಲಿರುವುದು ಇಂದು ದೃಢಪಟ್ಟಿದ್ದು, ಸೋಂಕಿತರಿಗೆ ಜಿಎಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯದಲ್ಲಿ ಎರಡು ಪ್ರಕರಣಗಳು ವರದಿಯಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಜಮ್ಮು ಮತ್ತು ಕಾಶ್ಮೀರ ಸರ್ಕಾರ, ಮಾರ್ಚ್ 31ರವರೆಗೆ ಪ್ರಾಥಮಿಕ ಶಾಲೆಗಳನ್ನು ತೆರೆಯದಂತೆ ಸೂಚಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.