ಮುಂಬೈ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ನಾಲ್ಕು ದಿನಗಳ ಹಿಂದೆ ಮುಂಬೈಗೆ ತೆರಳಿದ್ದ ಅತೃಪ್ತ ಶಾಸಕರು ಇದೀಗ ಬೆಂಗಳೂರಿನ ಏರ್ಪೋರ್ಟ್ಗೆ ಆಗಮಿಸಿದ್ದಾರೆ.
ಶಾಸಕ ಭೈರತಿ ಬಸವರಾಜ್ ಸೇರಿದಂತೆ ಇತರೆ ಕಾಂಗ್ರೆಸ್-ಜೆಡಿಎಸ್ ಶಾಸಕರು ಬೆಂಗಳೂರಿಗೆ ಬಂದು ಸ್ಪೀಕರ್ ಅವರನ್ನ ಖುದ್ದಾಗಿ ಭೇಟಿ ಮಾಡಲಿದ್ದು, ರಮೇಶ್ ಕುಮಾರ್ಗೆ ರಾಜೀನಾಮೆ ಪತ್ರ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಮುಂಬೈ ಏರ್ಪೋರ್ಟ್ನಿಂದ ಪ್ರಯಾಣ ಬೆಳೆಸಿದ್ದ ಅವರು, ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಕೆಲವೇ ಗಂಟೆಗಳಲ್ಲಿ ಅವರು ವಿಧಾನಸೌಧಕ್ಕೆ ತೆರಳಿ ಸ್ಪೀಕರ್ ಅವರಿಗೆ ಮತ್ತೊಮ್ಮೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಲಿದ್ದಾರೆ.
ಈಗಾಗಲೇ ವಿಧಾನಸೌಧಕ್ಕೆ ಸ್ಪೀಕರ್ ರಮೇಶ್ ಕುಮಾರ್ ಕೂಡ ಆಗಮಿಸಿದ್ದು, ಸಂಜೆ 6ರೊಳಗೆ ಅತೃಪ್ತ ಶಾಸಕರು ಇವರನ್ನ ಭೇಟಿ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಇದರ ಮಧ್ಯೆ ವಿಧಾನಸೌಧದಲ್ಲೇ ಬಿಎಸ್ ಯಡಿಯೂರಪ್ಪ ಶಾಸಕಾಂಗ ಸಭೆ ನಡೆಸುತ್ತಿದ್ದು, ಭಾರೀ ಪೊಲೀಸ್ ಬಿಗಿ ಬದೋಬಸ್ತ್ ಮಾಡಲಾಗಿದೆ.