ಮುಂಬೈ(ಮಹಾರಾಷ್ಟ್ರ): ಕೊರೊನಾ ಎಮರ್ಜೆನ್ಸಿ ಹಿನ್ನೆಲೆ ಹಲವಾರು ಜನರು ಆರ್ಥಿಕ ಸಹಾಯವನ್ನು ಮಾಡುತ್ತಿದ್ದು, ಶಿವಸೇನೆಯ ಎಲ್ಲಾ ಸಂಸದರು ಮತ್ತು ಶಾಸಕರು ತಮ್ಮ ಒಂದು ತಿಂಗಳ ಸಂಬಳವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಿದ್ದಾರೆ.
ಮಹಾಮಾರಿ ಕೊರೊನಾ ವೈರಸ್ ಇಡೀ ವಿಶ್ವವನ್ನೇ ಆವರಿಸುತ್ತಿದ್ದು, ಭಾರತದಲ್ಲಿ ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಲಾಕ್ ಡೌನ್ ಆದೇಶ ಹೊರಡಿಸಿದ್ದು, ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 724 ಕ್ಕೆ ಏರಿಕೆಯಾಗಿದ್ದು, ಇಲ್ಲಿಯವರೆಗೆ 17 ಜನರು ಸಾವನ್ನಪ್ಪಿದ್ದಾರೆ. 66 ಮಂದಿ ಚಿಕತ್ಸೆ ಪಡೆದು ಗುಣಮುಖರಾಗಿದ್ದಾರೆ.