ETV Bharat / bharat

ಅಕ್ರಮ ಬಂಧನ ಆರೋಪ: ಹಥ್ರಾಸ್ ಸಂತ್ರಸ್ತೆ ಕುಟುಂಬದ ಮನವಿ ತಿರಸ್ಕರಿಸಿದ ಹೈಕೋರ್ಟ್​ - ಹಥ್ರಾಸ್ ಅತ್ಯಾಚಾರ ಪ್ರಕರಣ

ಜಿಲ್ಲಾಡಳಿತ ನಮ್ಮನ್ನು ಮನೆಯಲ್ಲಿ ಅಕ್ರಮವಾಗಿ ಬಂಧಿಸಿದೆ ಎಂದು ಹಥ್ರಾಸ್ ಅತ್ಯಾಚಾರ ಮತ್ತು ಕೊಲೆ ಸಂತ್ರಸ್ತೆಯ ಕುಟುಂಬ ಸದಸ್ಯರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ.

Allahabad HC dismisses petition of Hathras victim's family
ಅಲಹಾಬಾದ್ ಹೈಕೋರ್ಟ್
author img

By

Published : Oct 9, 2020, 8:55 AM IST

ಪ್ರಯಾಗರಾಜ್ (ಉತ್ತರಪ್ರದೇಶ): ಜಿಲ್ಲಾಡಳಿತ ನಮ್ಮನ್ನು ನಮ್ಮ ಮನೆಯಲ್ಲಿ ಅಕ್ರಮ ಬಂಧನದಲ್ಲಿರಿಸಿದೆ ಎಂದು ಆರೋಪಿಸಿ ಜಿಲ್ಲಾಡಳಿತದ ವಿರುದ್ಧ ಹಥ್ರಾಸ್ ಅತ್ಯಾಚಾರ ಮತ್ತು ಕೊಲೆ ಸಂತ್ರಸ್ತೆಯ ಕುಟುಂಬ ಸದಸ್ಯರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ.

ನ್ಯಾಯಮೂರ್ತಿ ಪ್ರಕಾಶ್ ಪಾಡಿಯಾ ಮತ್ತು ನ್ಯಾಯಮೂರ್ತಿ ಪ್ರಿತಿಂಕರ್ ದಿವಾಕರ್ ಅವರನ್ನೊಳಗೊಂಡ ವಿಭಾಗೀಯ ನ್ಯಾಯ ಪೀಠವು ಸುಪ್ರೀಂಕೋರ್ಟ್ ಇಡೀ ಪ್ರಕರಣದಲ್ಲಿ ತನ್ನ ನಿಲುವನ್ನು ಸ್ಪಷ್ಟಪಡಿಸುವ ಅಫಿಡವಿಟ್​ಗಳನ್ನು ಸಲ್ಲಿಸಲು ಈಗಾಗಲೇ ನಿರ್ದೇಶನ ನೀಡಿದೆ ಎಂದು ಅಭಿಪ್ರಾಯಪಟ್ಟಿದೆ.

'ಪ್ರಕರಣದ ಮೇಲಿನ ಸಂಗತಿಗಳು ಮತ್ತು ಸನ್ನಿವೇಶಗಳಲ್ಲಿ, ಈ ನ್ಯಾಯಾಲಯವು ಪ್ರಸ್ತುತ ಅರ್ಜಿಯನ್ನು ಅರ್ಹತೆಗಳ ಮೇಲೆ ಪ್ರೋತ್ಸಹಿಸುವುದು ಸೂಕ್ತವಲ್ಲ ಎಂದು ಒತ್ತಾಯಿಸುತ್ತದೆ. ವಿಶೇಷವಾಗಿ ಸುಪ್ರೀಂಕೋರ್ಟ್ ಮಾಡಿದ ವೀಕ್ಷಣೆಯಲ್ಲಿ ಅರ್ಜಿದಾರರಿಗೆ 1ರಿಂದ 6 ಮತ್ತು ಮೃತ ಹುಡುಗಿಯ ಇತರ ಕುಟುಂಬ ಸದಸ್ಯರಿಗೆ ಭದ್ರತೆಯನ್ನು ಒದಗಿಸಲಾಗಿದೆ' ಎಂದು ನ್ಯಾಯಾಧೀಶರು ಹೇಳಿದ್ದಾರೆ.

'ಅರ್ಜಿದಾರರಿಗೆ ಯಾವುದೇ ಕುಂದು ಕೊರತೆ ಇದ್ದರೆ, ಅವರು ಸುಪ್ರೀಂಕೋರ್ಟ್ ಮುಂದೆ ಸೂಕ್ತ ಅರ್ಜಿಯನ್ನು ಸಲ್ಲಿಸಲು ಸ್ವಾತಂತ್ರ್ಯ ಹೊಂದಿದ್ದಾರೆ' ಎಂದು ನ್ಯಾಯಾಲಯ ಹೇಳಿದೆ.

ಜಿಲ್ಲಾಡಳಿತ ನಮ್ಮನ್ನು ಮನೆಯಲ್ಲಿ ಅಕ್ರಮವಾಗಿ ಬಂಧಿಸಿದೆ ಮತ್ತು ಮನಗೆ ಮುಕ್ತವಾಗಿ ಚಲಿಸಲು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿ ಹಥ್ರಾಸ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬ ಸದಸ್ಯರು ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಕುಟುಂಬ ಸದಸ್ಯರನ್ನು ಅಕ್ರಮ ಬಂಧನದಿಂದ ಬಿಡುಗಡೆ ಮಾಡಬೇಕು ಮತ್ತು ಮನೆಯಿಂದ ಹೊರ ಹೋಗಲು ಮತ್ತು ಜನರನ್ನು ಭೇಟಿ ಮಾಡಲು ಅವಕಾಶ ನೀಡಬೇಕು ಎಂದು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡುವಂತೆ ನ್ಯಾಯಾಲಯವನ್ನು ಕೋರಲಾಗಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.