ಲಖನೌ (ಉತ್ತರ ಪ್ರದೇಶ): ಇಲ್ಲಿನ 69,000 ಸಹಾಯಕ ಶಿಕ್ಷಕರ ನೇಮಕ ಪ್ರಕ್ರಿಯೆಯನ್ನು ಅಲಹಾಬಾದ್ ಹೈಕೋರ್ಟ್‌ನ ಲಖನೌ ನ್ಯಾಯಪೀಠ ತಡೆಹಿಡಿದಿದೆ.
ಪ್ರಕರಣದ ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯವು ಜುಲೈ 12 ದಿನಾಂಕವನ್ನು ನಿಗದಿಪಡಿಸಿದೆ. ನ್ಯಾಯಮೂರ್ತಿ ಅಲೋಕ್ ಮಾಥುರ್ ಈ ಆದೇಶ ನೀಡಿದ್ದಾರೆ.
ಉತ್ತರ ಪತ್ರಿಕೆಗಳಿಗೆ ಸಂಬಂಧಿಸಿದ ಆಕ್ಷೇಪಣೆಗಳನ್ನು ಒಂದು ವಾರದೊಳಗೆ ರಾಜ್ಯ ಸರ್ಕಾರಕ್ಕೆ ಸಲ್ಲಿಸುವಂತೆ ನ್ಯಾಯಾಲಯ ಅರ್ಜಿದಾರರಿಗೆ ನಿರ್ದೇಶನ ನೀಡಿದೆ.
ಪ್ರಾಥಮಿಕ ಶಿಕ್ಷಣ ಇಲಾಖೆ 69,000 ಸಹಾಯಕ ಶಿಕ್ಷಕರ ನೇಮಕಾತಿ ಫಲಿತಾಂಶವನ್ನು ಘೋಷಿಸಿತ್ತು.