ನವದೆಹಲಿ: ಉಸಿರಾಟ ಸಂಬಂಧಿ ಸಮಸ್ಯೆಯಿಂದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಮಿತ್ ಶಾ ಆರೋಗ್ಯವಾಗಿದ್ದು, ಆಸ್ಪತ್ರೆಯಿಂದಲೇ ಕಾರ್ಯನಿರ್ವಹಿಸುತ್ತಾರೆ ಎಂದು ಏಮ್ಸ್ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.
ಅಮಿತ್ ಶಾ ಈ ಮೊದಲು ಕೊರೊನಾ ಸೋಂಕಿನ ಕಾರಣಕ್ಕೆ ಹರಿಯಾಣದ ಗುರುಗ್ರಾಮದಲ್ಲಿರುವ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿ ಆಗಸ್ಟ್ 14ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.