ETV Bharat / bharat

ಲೋಕಸಭೆ ಆಯ್ತು,ವಿಧಾನ ಕದನಕ್ಕೆ ಕೇಸರಿ ಕಣ್ಣು! 3 ರಾಜ್ಯಗಳ ಚುನಾವಣೆಯತ್ತ ಶಾ ಚಿತ್ತ -

ಮಹಾರಾಷ್ಟ್ರ,ಜಾರ್ಖಂಡ್‌ ಹಾಗೂ ಹರಿಯಾಣ ವಿಧಾನಸಭೆಗಳಿಗೆ ಈ ವರ್ಷ ಚುನಾವಣೆ ನಡೆಯಲಿದ್ದು, ಬಿಜೆಪಿಯ ಕೋರ್‌ ಕಮಿಟಿ ಸದಸ್ಯರೊಂದಿಗೆ ಅಮಿತ್ ಶಾ ಮಾತುಕತೆ ನಡೆಸುತ್ತಿದ್ದಾರೆ.

ಬಿಜೆಪಿಯ ಕೋರ್‌ ಕಮಿಟಿ ಸದಸ್ಯರೊಂದಿಗೆ ಶಾ ಸಭೆ
author img

By

Published : Jun 9, 2019, 7:02 PM IST

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ ಗೆಲುವು ಸಾಧಿಸುವಲ್ಲಿ ರಾಜಕೀಯ ರಣತಂತ್ರ ರೂಪಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮುಂಬರುವ ಮೂರು ರಾಜ್ಯಗಳ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟಿದ್ದಾರೆ.

ಮಹಾರಾಷ್ಟ್ರ, ಜಾರ್ಖಂಡ್‌ ಹಾಗೂ ಹರಿಯಾಣ ವಿಧಾನಸಭೆಗಳಿಗೆ ಈ ವರ್ಷ ಚುನಾವಣೆ ನಡೆಯಲಿದ್ದು, ಬಿಜೆಪಿಯ ಕೋರ್‌ ಕಮಿಟಿ ಸದಸ್ಯರೊಂದಿಗೆ ಶಾ ಮಾತುಕತೆ ನಡೆಸುತ್ತಿದ್ದಾರೆ.

ಈ ಮೂರು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಮತ್ತೊಂದು ಅವಧಿಗೆ ಅಧಿಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ರಾಜ್ಯಗಳ ಬಿಜೆಪಿ ಮುಖಂಡರೊಂದಿಗೆ ದೆಹಲಿಯಲ್ಲಿ ಚರ್ಚಿಸುತ್ತಿದ್ದಾರೆ. ಕಾರ್ಯಕರ್ತರಿಗೆ ಇಂದಿನಿಂದಲೇ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವ ಸೇನೆಯ ಎನ್​ಡಿಎ ಮೈತ್ರಿಕೂಟಕ್ಕೆ ಎನ್​ಸಿಪಿ, ಕಾಂಗ್ರೆಸ್​ ಎದುರಾಳಿ ಆಗಲಿದೆ. ಜಾರ್ಖಂಡ್​ನಲ್ಲಿ ಬಿಜೆಪಿಯು ಕಾಂಗ್ರೆಸ್​, ಆರ್​ಜೆಡಿ, ಜೆಎಂಎಂ ಹಾಗೂ ಹರಿಯಾಣದಲ್ಲಿ ಕಾಂಗ್ರೆಸ್‌, ಐಎನ್‌ಎಲ್‌ಡಿ ಮತ್ತು ಜನಹಿತ ಕಾಂಗ್ರೆಸ್‌ ಪಕ್ಷಗಳಿಂದ ತೀವ್ರ ಸ್ಪರ್ಧೆ ಎದುರಿಸುತ್ತಿದೆ.

Intro:Body:Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.