ETV Bharat / bharat

ಅನರ್ಹ ಶಾಸಕರಿಗೆ ಬಿಜೆಪಿ ಟಿಕೆಟ್‌ ವಿಚಾರ: ಬಿಎಸ್​ವೈ ಜತೆ ಅಮಿತ್‌ ಶಾ ಮಹತ್ವದ ಚರ್ಚೆ! - ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ

ಅನರ್ಹ ಶಾಸಕರು ರಾಜ್ಯದಲ್ಲಿ ನಡೆಯುವ ಉಪಚುನಾವಣೆಗೆ ಸ್ಪರ್ಧಿಸಬಹುದು ಎಂದು ಸುಪ್ರೀಂಕೋರ್ಟ್​ ತೀರ್ಪು ನೀಡುತ್ತಿದ್ದಂತೆ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿವೆ.

ಅನರ್ಹರು ಬೈಎಲೆಕ್ಷನ್​​ ಸ್ಪರ್ಧೆ
author img

By

Published : Nov 13, 2019, 1:55 PM IST

ನವದೆಹಲಿ: ಉಪಚುನಾವಣೆಗೆ ಅನರ್ಹ ಶಾಸಕರು ಸ್ಪರ್ಧಿಸಬಹುದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿರುವ ಕಾರಣ, ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಅಖಾಡಕ್ಕಿಳಿದಿದ್ದಾರೆ. ಈಗಾಗಲೇ ಉಪಸಮರವನ್ನು ಗೆಲ್ಲುವ ನಿಟ್ಟಿನಲ್ಲಿ ಅವರು ಪಕ್ಷದ ರಾಜ್ಯದ ಹಿರಿಯ ಪದಾಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು ಇದೀಗ ಸಿಎಂ ಯಡಿಯೂರಪ್ಪನವರ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ತೀರ್ಪು ಹೊರಬೀಳುತ್ತಿದ್ದಂತೆ ಕರ್ನಾಟಕದ ಪ್ರಸ್ತುತ ಪರಿಸ್ಥಿತಿ ಬಗ್ಗೆ ಅಮಿತ್ ಶಾ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ರಾಜ್ಯ ಸರ್ಕಾರಕ್ಕೆ ಅಳಿವು ಉಳಿವಿನ ಪ್ರಶ್ನೆಯಾಗಿರುವ 15 ವಿಧಾನಸಭೆ ಕ್ಷೇತ್ರಗಳನ್ನು ಗೆಲ್ಲಲು ಅನುಸರಿಸಬೇಕಿರುವ ಕಾರ್ಯತಂತ್ರಗಳ ಬಗ್ಗೆ ಅವರು ಮುಖ್ಯಮಂತ್ರಿ ಯಡಿಯೂರಪ್ಪನವರ ಜೊತೆ 2ನೇ ಸುತ್ತಿನ ಸಭೆ ನಡೆಸುವ ಸಾಧ್ಯತೆ ಇದೆ.

ಇದೇ ವೇಳೆ ಅನರ್ಹ ಶಾಸಕರಿಗೆ ಸದ್ಯದ ಸ್ಥಿತಿಯಲ್ಲಿ ಬಿಜೆಪಿಯಿಂದ ಟಿಕೆಟ್​ ನೀಡಬಹುದು ಅಥವಾ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ಅವರು ಮಹತ್ವದ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

Intro:Body:

ಅನರ್ಹರು ಉಪಚುನಾವಣೆ ಸ್ಪರ್ಧೆ: ರಾಜ್ಯ ಬಿಜೆಪಿ ಘಟಕದ ನಂತ್ರ ಬಿಎಸ್​ವೈ ಜತೆ ಶಾ ಮಹತ್ವದ ಚರ್ಚೆ!

ನವದೆಹಲಿ: ರಾಜ್ಯದಲ್ಲಿ ಜೆಡಿಎಸ್​​+ಕಾಂಗ್ರೆಸ್​ ಸಮ್ಮಿಶ್ರ ಸರ್ಕಾರ ಅಧಿಕಾರ ನಡೆಸುತ್ತಿದ್ದ ವೇಳೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹಗೊಂಡಿದ್ದ 17 ಶಾಸಕರ ಕುರಿತಾದ ಮಹತ್ವದ ತೀರ್ಪನ್ನು ಸರ್ವೋಚ್ಛ ನ್ಯಾಯಾಲಯ ಇಂದು ಪ್ರಕಟಿಸಿದೆ.

ಇದರ ಮಧ್ಯೆ ರಾಜ್ಯದಲ್ಲಿ ನಡೆಯುವ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಡಿಸೆಂಬರ್​ 5ರಂದು ಮತದಾನ ನಡೆಯಲಿದೆ. ಈ ಚುನಾವಣೆಗೆ ಅನರ್ಹ ಶಾಸಕರು ಸ್ಪರ್ಧೆ ಮಾಡಬಹುದು ಎಂದು ಸುಪ್ರೀಂ ತೀರ್ಪು ನೀಡಿರುವ ಕಾರಣ, ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಕರ್ನಾಟಕ ರಾಜ್ಯ ಬಿಜೆಪಿ ಘಟಕದೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. 

ಇದೇ ವೇಳೆ ಕರ್ನಾಟಕದ ಪ್ರಸ್ತುತ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಶಾ, ಮುಖ್ಯಮಂತ್ರಿ ಯಡಿಯೂರಪ್ಪ ಜತೆ 2ನೇ ಸುತ್ತಿನ ಸಭೆ ನಡೆಸುವ ಸಾಧ್ಯತೆ ಇದೆ. ಇದೇ ವೇಳೆ ಅನರ್ಹ ಶಾಸಕರಿಗೆ ಸದ್ಯದ ಸ್ಥಿತಿಯಲ್ಲಿ ಬಿಜೆಪಿಯಿಂದ ಟಿಕೆಟ್​ ನೀಡಬಹುದು ಅಥವಾ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ಅವರು ಮಹತ್ವದ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. 

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.