ಕೋಲ್ಕತ್ತಾ : ಬಿಗ್ ಬಿ ಅಮಿತಾಬ್ ಬಚ್ಚನ್, ಪುತ್ರ ಅಭಿಷೇಕ್ ಬಚ್ಚನ್, ಐಶ್ವರ್ಯ ರೈ ಬಚ್ಚನ್ ಮತ್ತು ಆರಾಧ್ಯ ಬಚ್ಚನ್ ಗೆ ಕೊರೊನಾ ಸೋಂಕು ದೃಢಪಟ್ಟಿರುವ ಕಾರಣ ಅಭಿಮಾನಿಗಳು ಬಚ್ಚನ್ ಕುಟುಂಬ ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತಿದ್ದಾರೆ.
ಬಾಲಿವುಡ್‌ನ ಹಿರಿಯ ನಟ ಅಮಿತಾಬ್ ಬಚ್ಚನ್ ಅವರ ಅಭಿಮಾನಿಗಳು ಮತ್ತು ಹಿತೈಷಿಗಳು ಕೋಲ್ಕತ್ತಾದ ಹಲವಾರು ಪ್ರದೇಶಗಳಲ್ಲಿ ಇಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಚ್ಚನ್ ಕುಟುಂಬದವರು ಬೇಗನೆ ಗುಣಮುಖರಾಗಿ ಮನೆಗೆ ಮರಳಲಿ ಎಂದು ದೇವರಿಗೆ ಪ್ರಾರ್ಥನೆ ಮಾಡಲಾಯಿತು.