ನವದೆಹಲಿ: ಲೋಕಸಭೆಯಲ್ಲಿ ಅಂಗೀಕಾರವಾದ ಪೌರತ್ವ ತಿದ್ದುಪಡಿ ಮಸೂದೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟನೆ ಕೊಟ್ಟಿದ್ದಾರೆ.
ಪಾಕಿಸ್ತಾನ, ಆಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಧಾರ್ಮಿಕ ಕಿರುಕುಳ ಒಳಗಾಗುತ್ತಿರುವ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯಗಳ ವ್ಯಕ್ತಿಗಳಿಗೆ ಭಾರತದಲ್ಲಿ ಪೌರತ್ವ ನೀಡಲು ಈ ಮಸೂದೆ ಮಂಡಿಸಲಾಗಿದೆ. ಇದು ಉದ್ದೇಶಪೂರ್ವಕವಲ್ಲ ಎಂದು ಹೇಳಿದ್ದಾರೆ. ಉದ್ದೇಶಿತ ಮಸೂದೆ ಯಾರ ಅಧಿಕಾರವಾಗಲೀ, ಹಕ್ಕುಗಳನ್ನಾಗಲೀ ಕಿತ್ತುಕೊಳ್ಳುವುದಿಲ್ಲ. ಬದಲಾಗಿ ಅಧಿಕಾರ, ಹಕ್ಕುಗಳಿಂದ ವಂಚಿತರಾದವರ ರಕ್ಷಣೆ ಮಾಡುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
![The Bill is not against any Minority, but against Illegal Immigrants](https://etvbharatimages.akamaized.net/etvbharat/prod-images/5329528_bill.jpg)
ಈ ಮಸೂದೆ ಅಲ್ಪಸಂಖ್ಯಾತರ ವಿರುದ್ಧ ಅಲ್ಲ. ಇದು ಭಾರತದಲ್ಲಿರುವ ಅಕ್ರಮ ವಲಸಿಗರನ್ನು ಹೊರಹಾಕಲು ಮಂಡಿಸಿರುವ ಮಸೂದೆ. ಸಂಪೂರ್ಣ ಅಕ್ರಮ ವಲಸಿಗರ ವಿರುದ್ಧವಾಗಿದೆ ಎಂದು ಗೃಹ ಸಚಿವರು ವಿವರಿಸಿದ್ದಾರೆ.
ಈ ಮಸೂದೆಯಿಂದಾಗಿ ವಿಧಿ 371ರ ಯಾವೊಂದು ನಿಬಂಧನೆಗಳನ್ನು ಉಲ್ಲಂಘಿಸಿಲ್ಲ. ಈಶಾನ್ಯ ಜನರ ಸಮಸ್ಯೆಗಳಿಗೆ ಪರಿಹಾರ ನೀಡುವ ಉದ್ದೇಶವನ್ನು ಒಳಗೊಂಡಿದೆ ಎಂದು ತಿಳಿಸಿದ್ರು.