ETV Bharat / bharat

ಕೊರೊನಾ ನಡುವೆ ವಕ್ಕರಿಸುತ್ತಿದೆ ಭಯಾನಕ 'ಅಂಫಾನ್' ಚಂಡಮಾರುತ! - ಬೇ ಆಫ್​ ಬೆಂಗಾಲಿಯಲ್ಲಿ ಚಂಡಮಾರುತ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದು ಮುಂದಿನ 24 ಗಂಟೆಗಳಲ್ಲಿ ಚಂಡಮಾರುತವಾಗಿ ಪರಿವರ್ತನೆಯಾಗಲಿದ್ದು, ಪೂರ್ವ ಕರಾವಳಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

depression in Bay of Bengal to intensify into cyclonic storm
ಅಂಫಾನ್ ಚಂಡಮಾರುತ
author img

By

Published : May 16, 2020, 3:59 PM IST

Updated : May 16, 2020, 5:03 PM IST

ನವದೆಹಲಿ: ಕೊರೊನಾ ಪ್ರಕರಣಗಳ ಏರುವಿಕೆಯ ಆಘಾತದ ನಡುವೆ ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿದೆ. ಇದರ ಪರಿಣಾಮ ಪೂರ್ವ ಕರಾವಳಿಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಅಂಫಾನ್(Amphan) ಹೆಸರಿನ ಚಂಡಮಾರುತ ಇಂದು ಸಂಜೆ ಬಂಗಾಳ ಕೊಲ್ಲಿಯ ವಾಯುವ್ಯ ಭಾಗಕ್ಕೆ ಅಪ್ಪಳಿಸಲಿದ್ದು, ಇನ್ನೆರಡು ದಿನಗಳಲ್ಲಿ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಮುನ್ಸೂಚನೆ ನೀಡಿದೆ. ಮುಂದಿನ ಐದು-ಆರು ದಿನಗಳವರೆಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಒಡಿಶಾ ಮತ್ತು ಪಶ್ಚಿಮ ಬಂಗಾಳ ಆಂಧ್ರ ಪ್ರದೇಶದ ಕರಾವಳಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಹರಿಯಾಣ ಮತ್ತು ದೆಹಲಿಯ ಕೆಲವು ಭಾಗಗಳಲ್ಲಿ ಮೇ 17 ರಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿಯ ವಾಯುವ್ಯ ಹವಾಮಾನ ಕೇಂದ್ರದ ಮುಖ್ಯಸ್ಥ ಕುಲದೀಪ್ ಶ್ರೀವಾಸ್ತವ್​ ತಿಳಿಸಿದ್ದಾರೆ.

ಸಂಜೆ ವೇಳೆಗೆ ಬಂಗಾಳ ಕೊಲ್ಲಿ ಮೂಲಕ ಅಂಫಾನ್ ಸೈಕ್ಲೋನ್ ಹಾದು ಹೋಗಲಿದ್ದು, ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆ ಒಡಿಶಾದ ಕರಾವಳಿಯ 12 ಜಿಲ್ಲಾಧಿಕಾರಿಗಳು ಪರಿಸ್ಥಿತಿ ಎದುರಿಸಲು ಸಜ್ಜಾಗುವಂತೆ ಒಡಿಶಾ ಸರ್ಕಾರ ಸೂಚನೆ ನೀಡಿದೆ.

ವಾಯುಭಾರ ಕುಸಿತದಿಂದಾಗಿ ಸಮುದ್ರದಲ್ಲಿ ಅಲೆಗಳ ಏರಿಳಿತ ಹೆಚ್ಚಾಗಲಿದೆ. ಹೀಗಾಗಿ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ತಗ್ಗು ಪ್ರದೇಶಗಳ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ತಿಳಿಸಲಾಗಿದೆ. ಚಂಡಮಾರುತದ ಪರಿಸ್ಥಿತಿ ಎದುರಿಸಲು ಎನ್‍ಡಿಆರ್​​ಎಫ್, ಎಸ್‍ಡಿಆರ್​ಎಫ್ ಮತ್ತು ಇತರೆ ರಕ್ಷಣಾ ದಳಗಳು ಈಗಾಗಲೇ ಸಜ್ಜಾಗಿವೆ.
.

Last Updated : May 16, 2020, 5:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.