ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ ಏರ್ಪಟ್ಟಿದೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ಟ್ರಾಲ್‌ನ ಗುಲ್ಶನ್‌ಪೋರಾ ಪ್ರದೇಶದಲ್ಲಿ ಉಗ್ರರಿರುವ ಬಗ್ಗೆ ಗುಪ್ತಚರದಿಂದ ಮಾಹಿತಿ ಪಡೆದ ಭದ್ರತಾ ಪಡೆಗಳು, ಅಲ್ಲಿ ಶೋಧ ಕಾರ್ಯ ಮುಂದುವರೆಸಿವೆ. ಭದ್ರತಾ ಪಡೆಗಳ ಕಾರ್ಯಾಚರಣೆ ನಡೆಸುವ ವೇಳೆ ಉಗ್ರರು ಗುಂಡು ಹಾರಿಸಿದ್ದು, ಇದು ಎನ್ಕೌಂಟರ್ಗೆ ಕಾರಣವಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಇನ್ನು ಭದ್ರತಾ ಪಡೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದು, ಈ ಸಂಬಂಧ ಯಾವುದೇ ಅಧಿಕೃತ ಮಾಹಿತಿ ಹೊರಬಂದಿಲ್ಲ.
ಉಗ್ರರು ಹಾಗೂ ಭದ್ರತಾ ಪಡೆ ನಡುವಿನ ಗುಂಡಿನ ಚಕಮಕಿ ಮುಂದುವರೆದಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.