ಅಮರಾವತಿ : ರೈತರಿಗೆ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ನೆರವಾಗುವ ಮೊಬೈಲ್ ಅಪ್ಲಿಕೇಶನ್ 'ಸಿಎಂಆ್ಯಪ್'(CMAPP-Comprehensive Monitoring of Agriculture, Price and Procurement)ನ್ನು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಬಿಡುಗಡೆ ಮಾಡಿದ್ದಾರೆ.
ಮಾರ್ಕೆಟಿಂಗ್ ಇಂಟೆಲಿಜೆನ್ಸ್ ಕುರಿತ ಪರಿಶೀಲನಾ ಸಭೆಯಲ್ಲಿ ಆ್ಯಪ್ ಬಿಡುಗಡೆ ಮಾಡಿದ ಸಿಎಂ ಜಗನ್, ಈ ನೂತನ ಮೊಬೈಲ್ ಅಪ್ಲಿಕೇಶನ್ ರೈತರ ಕೃಷಿ ಉತ್ಪನ್ನಗಳ ಬೆಲೆ, ಸಂಗ್ರಹಣೆ ಮತ್ತು ಮಾರುಕಟ್ಟೆ ಸೌಲಭ್ಯಗಳಿಗೆ ಸಂಬಂಧಿಸಿದ ಮಾಹಿತಿಯನ್ನು ನೀಡಿಲಿದೆ ಎಂದರು. ಗ್ರಾಮ ಮಟ್ಟದಲ್ಲಿ ಪ್ರತಿದಿನ ಕೃಷಿ ಉತ್ಪನ್ನಗಳ ಮಾರಾಟ ಮತ್ತು ಖರೀದಿ ಸೇರಿದಂತೆ ಕೃಷಿ ಪರಿಸ್ಥಿತಿಗಳ ಬಗ್ಗೆ ನಿಗಾವಹಿಸಿ ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕೃಷಿಗೆ ಸಂಬಂಧಿಸಿದಂತೆ ನಿಯೋಜಿಸಲಾದ ಎಲ್ಲಾ ಜಂಟಿ ಸಂಗ್ರಾಹಕರಿಗೆ ಅಪ್ಲಿಕೇಶನ್‌ನ ಬಳಕೆ ಕುರಿತು ತ್ವರಿತವಾಗಿ ತರಬೇತಿ ನೀಡಲಾಗುವುದು ಎಂದು ರೆಡ್ಡಿ ತಿಳಿಸಿದರು. ಆಂಧ್ರ ಪ್ರದೇಶ ಕೃಷಿ ಮಿಷನ್ ಉಪಾಧ್ಯಕ್ಷ ಎಂ ವಿ ಎಸ್ ನಾಗಿ ರೆಡ್ಡಿ ಮತ್ತು ಕೃಷಿ ಇಲಾಖೆಯ ವಿಶೇಷ ಮುಖ್ಯ ಕಾರ್ಯದರ್ಶಿ ಪೂನಂ ಮಲಕೊಂಡಯ್ಯ ಈ ವೇಳೆ ಉಪಸ್ಥಿತರಿದ್ದರು.