ಚಿತ್ತೂರು(ಆಂಧ್ರಪ್ರದೇಶದ): ನದಿ ಬಳಿ ಸೆಲ್ಫಿ ತೆಗೆದುಕೊಳ್ಳಲು ತೆರಳಿದ ತಾಯಿ ಮತ್ತು ಮಗ ನೀರಿನಲ್ಲಿ ಕೊಚ್ಚಿ ಹೋಗಿದ್ದು, ತಾಯಿಯ ಮೃತದೇಹ ಪತ್ತೆಯಾಗಿದೆ.
ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಜಲ್ಲಿಪೆಟ್ಟಾ ಪ್ರದೇಶದ ಕೌಂಡಿನ್ಯಾ ಚೆಕ್ ಡ್ಯಾಮ್ ಬಳಿ ಈ ಘಟನೆ ನಡೆದಿದೆ. ತಾಯಿ ಮತ್ತು ಮಗ ನದಿಯ ಪಕ್ಕದಲ್ಲೇ ಇರುವ ಬಂಡೆಯ ಮೇಲೆ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ಕಾಲು ಜಾರಿ ಇಬ್ಬರು ನೀರಿಗೆ ಬಿದ್ದಿದ್ದಾರೆ.
ತಾಯಿ ಮತ್ತು ಮಗ ಪಾಲಮನೇರು ಗದ್ದೂರ್ ಕಾಲೋನಿಯ ನಿವಾಸಿಗಳು ಎಂದು ಗುರುತಿಸಲಾಗಿದೆ. ಸ್ಥಳೀಯರು ಮಹಿಳೆ ಮೃತದೇಹವನ್ನು ಪತ್ತೆ ಹಚ್ಚಿದ್ದು, ಬಾಲಕ ಕಾಣೆಯಾಗಿದ್ದಾನೆ. ಸ್ಥಳೀಯರ ಮಾಹಿತಿಯ ಮೇರೆಗೆ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತೆರಳಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.