ಗುಂಟೂರು (ಆಂಧ್ರಪ್ರದೇಶ): ಐದಂತಸ್ತಿನ ಕಟ್ಟಡದ ಮೇಲಿನಿಂದ ಮಹಿಳೆಯೊಬ್ಬಳು ತನ್ನ 9 ತಿಂಗಳ ಮಗುವನ್ನು ಎಸೆದು ಬಳಿಕ ತಾನೂ ಜಿಗಿದಿರುವ ಹೃದಯವಿದ್ರಾವಕ ಘಟನೆ ಗುಂಟೂರಿನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಇನ್ನು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ತಾಯಿಯನ್ನು ಆಸ್ಪತ್ರೆಗೆ ಕರೆದುಕೊಂಡು ರವಾನಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪೊಲೀಸ್ ಮಾಹಿತಿ ಪ್ರಕಾರ, ಮಹಿಳೆಯ ಪೋಷಕರು ಸಾವಿನ ಬಗ್ಗೆ ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲಾಗಿದೆ.
ಗುಂಟೂರು ನಗರದ ಲಕ್ಷ್ಮಿಪುರಂ ನಿವಿವಾಸಿಗಳಾದ ನರ್ರಾ ಮನೋಜ್ಞಾ (29) ಮೊದಲು ತನ್ನ ತುಳಸಿ ಎಂಬ ಮಗಳನ್ನು ಕಟ್ಟಡದ ಮೇಲಿಂದ ಎಸೆದು ಬಳಿಕ ತಾನು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪಟ್ಟಾಭಿಪುರಂ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ವೈ. ಸತ್ಯನಾರಾಯಣ ತಿಳಿಸಿದ್ದಾರೆ.
"ಈ ಘಟನೆ ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ನಡೆದಿದೆ. ಹೆಣ್ಣು ಮಗು ಸ್ಥಳದಲ್ಲೇ ಮೃತಪಟ್ಟಿದ್ದರೆ, ಮಹಿಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ" ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಘಟನೆ ಸಂಬಂಧ ಮೃತ ಮಹಿಳೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಭಾರತೀಯ ದಂಡ ಸಂಹಿತೆಯ ಸಂಬಂಧಿತ ವಿಭಾಗಗಳ ನಿಬಂಧನೆಗಳ ಅಡಿಯಲ್ಲಿ ಪೊಲೀಸರು ಅನುಮಾನಾಸ್ಪದ ಸಾವಿನ ಪ್ರಕರಣವನ್ನು ದಾಖಲಿಸಿದ್ದು, ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.