ETV Bharat / bharat

ರೈತರ ಬೇಡಿಕೆ ಈಡೇರದಿದ್ದರೆ ಉಪವಾಸ: ಕೇಂದ್ರಕ್ಕೆ ಅಣ್ಣಾ ಹಜಾರೆ ಪತ್ರ

Anna Hazare
ಅಣ್ಣಾ ಹಜಾರೆ
author img

By

Published : Dec 14, 2020, 7:51 PM IST

Updated : Dec 14, 2020, 8:21 PM IST

19:46 December 14

ಕೇಂದ್ರಕ್ಕೆ ಅಣ್ಣಾ ಹಜಾರೆ ಪತ್ರ

Anna Hazare letter
ಅಣ್ಣಾ ಹಜಾರೆ ಪತ್ರ

ನವದೆಹಲಿ: ಸಾಮಾಜಿಕ ಹೋರಾಟಗಾರರಾದ ಅಣ್ಣಾ ಹಜಾರೆ ರಾಷ್ಟ್ರ ರಾಜಧಾನಿಯಲ್ಲಿ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ರೈತ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ಈ ಕುರಿತು ಕೇಂದ್ರಕ್ಕೆ ಪತ್ರ ಬರೆದಿರುವ ಅವರು ಉಪವಾಸ ಸತ್ಯಾಗ್ರಹ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್​​ಗೆ ಪತ್ರ ಬರೆದಿರುವ ಅಣ್ಣಾ ಹಜಾರೆ ರೈತರ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದಲ್ಲಿ ಉಪವಾಸ ಸತ್ಯಾಗ್ರಹ ಕೈಗೊಳ್ಳುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. 

ಇದನ್ನೂ ಓದಿ: ರೈತ ಪ್ರತಿಭಟನೆಗೆ ದೆಹಲಿ ಸಿಎಂ ಬೆಂಬಲ: ಸೋಮವಾರ ಒಂದು ದಿನದ ಉಪವಾಸ

ಈ ಹಿಂದೆ 2019 ಜನವರಿ 29ರಂದು ಲೋಕಪಾಲ ನೇಮಕಕ್ಕೆ ಹಾಗೂ ರೈತರ ಆದಾಯ ಹೆಚ್ಚಳಕ್ಕೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ರಾಳೆಗಣ  ಸಿದ್ಧಿಯಲ್ಲಿ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹಕ್ಕೆ ಕರೆ ಕೊಟ್ಟಿದ್ದರು. 

ಈ ವೇಳೆ, ಸ್ಥಳಕ್ಕೆ ಆಗಮಿಸಿದ ಮಹಾರಾಷ್ಟ್ರದ ದೇವೇಂದ್ರ ಫಡ್ನವೀಸ್,  ಆಗಿನ ಕೃಷಿ ಮಂತ್ರಿ ರಾಧಾಮೋಹನ್ ಸಿಂಗ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಇದಕ್ಕಾಗಿ ಉನ್ನತ ಮಟ್ಟದ ಸಮಿತಿಯನ್ನು ರಚಿಸುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಡಲಾಗಿತ್ತು. ಈ ವಿಚಾರವನ್ನೂ ಕೂಡಾ ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ. 

Last Updated : Dec 14, 2020, 8:21 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.