ETV Bharat / bharat

ಗುಜರಾತ್​ನಲ್ಲಿ ಕೊರೊನಾಗೆ 3ನೇ ಬಲಿ: ದೇಶದಲ್ಲಿ 16ಕ್ಕೇರಿದ ಸಾವಿನ ಸಂಖ್ಯೆ

ಕೊರೊನಾ ದೇಶದಲ್ಲಿ ಮರಣ ಮೃದಂಗ ಬಾರಿಸುತ್ತಿದೆ. ಗುಜರಾತ್​ನಲ್ಲಿ ಮೂರನೇ ಸೋಂಕಿತ ಸಾವನ್ನಪ್ಪಿದ್ದು, ದೇಶದಲ್ಲಿ ಕೊರೊನಾಗೆ ಸಾವನ್ನಪ್ಪಿದವರ ಸಂಖ್ಯೆವ 16ಕ್ಕೆ ಏರಿಕೆಯಾಗಿದೆ.

another corona positive case passed away in gujarat
ಗುಜರಾತ್​ನಲ್ಲಿ ಕೊರೊನಾಗೆ ಮೂರನೇ ಬಲಿ
author img

By

Published : Mar 26, 2020, 12:34 PM IST

ನವದೆಹಲಿ: ಗುಜರಾತ್​ ರಾಜ್ಯದಲ್ಲಿ ಕೊರೊನಾ ಪೀಡಿತ 3ನೇ ವ್ಯಕ್ತಿ ಸಾವನ್ನಪ್ಪಿದ್ದು, ದೇಶದಲ್ಲಿ ಕೊರೊನಾದಿಂದ ಸಾವಿಗೀಡಾದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಗುಜರಾತ್​ನಲ್ಲಿ 37 ಮಂದಿ ಸೋಂಕಿತರಿದ್ದು ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ 649ಕ್ಕೆ ಮುಟ್ಟಿದೆ.

ಮಹಾರಾಷ್ಟ್ರದ ಮುಂಬೈನಲ್ಲಿ 65 ವರ್ಷದ ಕೊರೊನಾ ಸೋಂಕಿತ ಮಹಿಳೆ ಮೃತಪಟ್ಟಿದ್ದಾಳೆ. ಸಾವಿನ ಕಾರಣವನ್ನು ಪರಿಶೀಲಿಸಲಾಗುತ್ತಿದೆ ಎಂದು ಅಲ್ಲಿನ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ಇದರಿಂದಾಗಿ ಮಹಾರಾಷ್ಟ್ರದಲ್ಲಿ ಸೋಂಕಿತರ ಸಾವಿನ ನಾಲ್ಕಕ್ಕೆ ಏರಿಕೆಯಾಗಿದೆ. ಸೋಂಕು ಪೀಡಿತರ ಸಂಖ್ಯೆ 123ಕ್ಕೆ ಮಂದಿ ಇದ್ದು, ಇಂದು ಇಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಮುಂಬೈ ಹಾಗೂ ಥಾಣೆಯಲ್ಲಿ ತಲಾ ಒಂದೊಂದು ಪ್ರಕರಣಗಳು ಕಂಡುಬಂದಿವೆ. ಓರ್ವ ವ್ಯಕ್ತಿಗೆ ಚಿಕಿತ್ಸೆ ನೀಡಿ ಗುಣಪಡಿಸಲಾಗಿದೆ.

ಜಮ್ಮು ಕಾಶ್ಮೀರದಲ್ಲಿ ಕೊರೊನಾ ಸೋಂಕಿಗೆ ಮೊದಲ ಸಾವು ಸಂಭವಿಸಿದೆ. ಹೈದರ್‌ಪೊರಾದ 65 ವರ್ಷದ ಕೊರೊನಾ ಸೋಂಕಿತ ವೃದ್ಧ ಇಂದು ಮೃತಪಟ್ಟಿದ್ದಾನೆ. ಅಷ್ಟೇ ಅಲ್ಲದೆ ಅವರ ಜೊತೆಗೆ ಸಂಪರ್ಕ ಹೊಂದಿದ್ದ ನಾಲ್ವರಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಜಮ್ಮು ಕಾಶ್ಮೀರಲ್ಲಿ ಈವರೆಗೂ 11 ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಓರ್ವ ವ್ಯಕ್ತಿಯನ್ನು ಸೋಂಕಿನಿಂದ ಗುಣಪಡಿಸಿ ಡಿಸ್ಚಾರ್ಜ್​ ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.