ETV Bharat / bharat

ಹೈಡ್ರಾಕ್ಸಿಕ್ಲೋರೋಕ್ವಿನ್​​ ಔಷಧಿ ಕ್ಲಿನಿಕಲ್​ ಪ್ರಯೋಗಗಳಿಗೆ ಪುನರ್​ ಚಾಲನೆ: ವಿಶ್ವ ಆರೋಗ್ಯ ಸಂಸ್ಥೆ

author img

By

Published : Jun 4, 2020, 1:40 AM IST

Updated : Jun 4, 2020, 5:04 AM IST

ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಯ ಮೇಲಿನ ಪ್ರಯೋಗಾರ್ಥ ಪರೀಕ್ಷೆಯನ್ನ ಇದೀಗ ವಿಶ್ವ ಆರೋಗ್ಯ ಸಂಸ್ಥೆ ಪುನರ್​ ಚಾಲನೆ ನೀಡಿದೆ.

Hydroxychloroquine
Hydroxychloroquine

ನವದೆಹಲಿ: ಮಹಾಮಾರಿ ಕೊರೊನಾ ಜ್ವರಕ್ಕೆ ರಾಮಬಾಣ ಎಂದು ಪರಿಗಣಿಸಲಾಗಿದ್ದ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಯ ಮೇಲಿನ ಪ್ರಯೋಗಾರ್ಥ ಪರೀಕ್ಷೆಯನ್ನು ಕಳೆದ ಕೆಲ ದಿನಗಳ ಹಿಂದೆ ತಾತ್ಕಾಲಿಕವಾಗಿ ಕೈಬಿಟ್ಟಿದ್ದ ವಿಶ್ವ ಆರೋಗ್ಯ ಸಂಸ್ಥೆ, ಇದೀಗ ಮತ್ತೊಮ್ಮೆ ಪುನರ್​ ಚಾಲನೆ ನೀಡಿದೆ.

ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಯಿಂದ ಅಡ್ಡಪರಿಣಾಮಗಳು ಹೆಚ್ಚಿದ್ದು, ಹೃದಯಾಘಾತದ ಆತಂಕ ವ್ಯಕ್ತಪಡಿಸಿತ್ತು. ಆದರೆ ಇದೀಗ ಹೈಡ್ರಾಕ್ಸಿಕ್ಲೋರೋಕ್ವಿನ್ (Hydroxychloroquine) ಔಷಧದ ಕ್ಲಿನಿಕಲ್ ಪ್ರಯೋಗಗಳು ಪುನರಾರಂಭಗೊಂಡಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಅಧಿಕೃತ ಪ್ರಕಟಣೆ ಹೊರಡಿಸಿದೆ. ಈ ಔಷಧಿ ಭಾರತದಲ್ಲಿ ಅತಿ ಹೆಚ್ಚು ಉತ್ಪಾದನೆಗೊಳ್ಳುತ್ತಿದೆ.

ಇದಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್​, ಹೈಡ್ರೋಕ್ಸಿಕ್ಲೋರೋಕ್ವಿನ್ ಔಷಧಿ ಕ್ಲಿನಿಕಲ್​ ಪ್ರಯೋಗಗಳಿಗೆ ಪುನರ್​ ಚಾಲನೆ ನೀಡಲು ಇದೀಗ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.​​

ಕೊರೊನಾ ರೋಗಿಗಳ ಚಿಕಿತ್ಸೆಗಾಗಿ ಅಮೆರಿಕ ಸೇರಿದಂತೆ ಸ್ಪೇನ್, ಜರ್ಮನಿ, ಬಹರೇನ್, ಬ್ರೆಜಿಲ್, ನೇಪಾಳ, ಭೂತಾನ್, ಅಫ್ಘಾನಿಸ್ತಾನ, ಶ್ರೀಲಂಕಾ, ಮಾಲ್ಡೀವ್ಸ್, ಬಾಂಗ್ಲಾದೇಶ, ಸೀಶೆಲ್ಸ್, ಮಾರಿಷಸ್ ಮತ್ತು ಡೊಮಿನಿಕನ್ ರಿಪಬ್ಲಿಕ್ ದೇಶಗಳಿಗೆ ಮಾತ್ರೆಯನ್ನು ಭಾರತ ರಫ್ತು ಮಾಡಿತ್ತು.

Last Updated : Jun 4, 2020, 5:04 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.