ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಅಲ್ತಾಫ್ ಬುಖಾರಿ ನೇತೃತ್ವದ ಅಪ್ನಿ ಪಕ್ಷದ ಕಾರ್ಯಕರ್ತನನ್ನು ಅಪರಿಚಿತ ಬಂದೂಕುಧಾರಿಯೊಬ್ಬ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ.
ರಾಜೌರಿ ಜಿಲ್ಲೆಯ ದ್ರಾಜ್ ಗ್ರಾಮದಲ್ಲಿ ಅಪ್ನಿ ಪಕ್ಷದ ಕಾರ್ಯಕರ್ತ ರಂಜಿತ್ ಸಿಂಗ್ (36) ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ ಮನೆಯ ಹೊರಗಡೆ ನಿಂತಿದ್ದಾಗ, ಅಪರಿಚಿತ ಬಂದೂಕುಧಾರಿಯೊಬ್ಬ ಬಂದು ಗುಂಡು ಹಾರಿಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
"ತಕ್ಷಣ ಅವರನ್ನು ರಾಜೌರಿ ಪಟ್ಟಣದ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ವೈದ್ಯರು ಅವರ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದಿದ್ದರು" ಎಂದು ಮೂಲಗಳು ತಿಳಿಸಿವೆ.
ಓದಿ:ಸಿಂಘು ಗಡಿಯಲ್ಲಿ ಹೃದಯಾಘಾತದಿಂದ ಮತ್ತೋರ್ವ ರೈತ ಸಾವು
ಈ ಘಟನೆ ಸಂಬಂಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಅಪರಾಧಿಗಳ ಪತ್ತೆಗೆ ತನಿಖೆ ಆರಂಭಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ತಿಂಗಳ ಆರಂಭದಲ್ಲಿ ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಅಪ್ನಿ ಪಕ್ಷದ ಮತ್ತೊಬ್ಬ ಕಾರ್ಯಕರ್ತನನ್ನು ಉಗ್ರರು ಗುಂಡಿಕ್ಕಿ ಗಾಯಗೊಳಿಸಿದ್ದರು.