ಲೇಹ್ (ಲಡಾಖ್): ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನಾರವಾನೆ ಅವರು ಲೇಹ್ಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಉತ್ತರ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ವೈ.ಕೆ.ಜೋಶಿ, 14 ಕಾರ್ಪ್ಸ್ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಹರಿಂದರ್ ಸಿಂಗ್ ಮತ್ತು ಇತರ ಹಿರಿಯ ಅಧಿಕಾರಿಗಳು ಸೇರಿದಂತೆ ಲೇಹ್ನ ಉನ್ನತ ಮಿಲಿಟರಿ ಫೀಲ್ಡ್ ಕಮಾಂಡರ್ಗಳು ಎಲ್ಎಸಿ ಪರಿಸ್ಥಿತಿಯ ಬಗ್ಗೆ ಸೇನಾ ಮುಖ್ಯಸ್ಥರಿಗೆ ಮಾಹಿತಿ ನೀಡಿದರು.
ಲಡಾಕ್ ಸೆಕ್ಟರ್ನಲ್ಲಿ ಚೀನಾದೊಂದಿಗೆ ಬಿಕ್ಕಟ್ಟಿನ ಪರಿಸ್ಥಿತಿ ಇದೆ ಎಂದು ತಿಳಿದು ಬಂದಿದೆ. ಭಾರತೀಯ ಸೇನಾ ಕಮಾಂಡರ್ಗಳು ಪರಿಸ್ಥಿತಿಯ ಕುರಿತು ಮಾತುಕತೆ ನಡೆಸುತ್ತಿದ್ದು, ಬಿಕ್ಕಟ್ಟಿನಿಂದ ಹೊರ ಬರಲು ಮಾರ್ಗ ಕಂಡುಕೊಳ್ಳುತ್ತಿದ್ದಾರೆ.