ETV Bharat / bharat

ಪಾಕ್​ನಿಂದ ಮತ್ತೆ ಗುಂಡಿನ ದಾಳಿ : ಕಿರಿಯ ಸೇನಾಧಿಕಾರಿ ಹುತಾತ್ಮ - ಪಾಕಿಸ್ತಾನ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಪಡೆಗಳು ಕದನ ವಿರಾಮ ಉಲ್ಲಂಘನೆ ಮುಂದುವರೆಸಿದ್ದು, ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಕಿರಿಯ ಸೇನಾಧಿಕಾರಿಯೋರ್ವರು (ಜೆಸಿಒ) ಹುತಾತ್ಮರಾಗಿದ್ದಾರೆ.

army-jco-killed-in-pak-shelling-along-loc-in-j-k
ಪಾಕ್​ನಿಂದ ಮತ್ತೆ ಗುಂಡಿನ ದಾಳಿ
author img

By

Published : Oct 6, 2020, 3:33 AM IST

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಸೋಮವಾರ ಪಾಕಿಸ್ತಾನ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಕಿರಿಯ ಸೇನಾಧಿಕಾರಿಯೋರ್ವರು (ಜೆಸಿಒ) ಹುತಾತ್ಮರಾಗಿದ್ದಾರೆ.

ರಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‌ನ ಬಾಬಖೋರಿಯ ಗಡಿ ನಿಯಂತ್ರಣಾ ರೇಖೆಯಲ್ಲಿ ಸಂಜೆ ಪಾಕಿಸ್ತಾನ ಪಡೆಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸಿವೆ. ಕಳೆದ ಐದು ದಿನಗಳಲ್ಲಿ ಪಾಕಿಸ್ತಾನ ನಡೆಸಿದ ಕದನ ವಿರಾಮ ಉಲ್ಲಂಘನೆಯಲ್ಲಿ ಸೇನೆಯ ನಾಲ್ವರು ಸಿಬ್ಬಂದಿ ಪ್ರಾಣ ಕಳೆದುಕೊಂಡಂತಾಗಿದೆ.

ಸೋಮವಾರ ಸಂಜೆ 6.30ರ ಸುಮಾರಿಗೆ ಪಾಕಿಸ್ತಾನ ಪಡೆಗಳು ರಾಜೌರಿಯ ನೌಶೇರಾ ಸೆಕ್ಟರ್‌ನಲ್ಲಿ ಅಪ್ರಚೋದಿತ ದಾಳಿ ಆರಂಭಿಸಿವೆ. ಭಾರತೀಯ ಸೇನೆಯು ತಕ್ಕ ಪ್ರತ್ಯತ್ತರ ನೀಡಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ಅಕ್ಟೋಬರ್ 1ರಂದು ಪೂಂಚ್‌ನ ಕೃಷ್ಣ ಘಾಟಿ ಸೆಕ್ಟರ್ ಮತ್ತು ಕುಪ್ವಾರಾ ಜಿಲ್ಲೆಯ ನೌಗಮ್ ಸೆಕ್ಟರ್‌ನಲ್ಲಿ ಪಾಕಿಸ್ತಾನವು ಗುಂಡಿನ ದಾಳಿ ಮತ್ತು ಫಾರ್ವರ್ಡ್ ಪೋಸ್ಟ್‌ಗಳ ಮೇಲೆ ಶೆಲ್ ದಾಳಿ ನಡೆಸಿದ್ದರಿಂದ ಮೂವರು ಸೇನಾ ಸಿಬ್ಬಂದಿ ಮೃತಪಟ್ಟು, ಐವರು ಗಾಯಗೊಂಡಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.