ETV Bharat / bharat

ಗಡಿಯಲ್ಲಿ ಪಾಕ್​​ನಿಂದ ಕದನ ವಿರಾಮ ಉಲ್ಲಂಘನೆ: ಸೇನಾ ಅಧಿಕಾರಿ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನಿ ಪಡೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಸೇನೆಯ ಕಿರಿಯ ಅಧಿಕಾರಿವೋರ್ವರು ಹುತಾತ್ಮರಾಗಿದ್ದಾರೆ.

ceasefire violation
ಸೇನಾ ಅಧಿಕಾರಿ ಹುತಾತ್ಮ
author img

By

Published : Aug 30, 2020, 1:08 PM IST

ಜಮ್ಮು-ಕಾಶ್ಮೀರ: ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನಿ ಪಡೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಭಾರತೀಯ ಸೇನೆಯ ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಹುತಾತ್ಮರಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ ಬಳಿ ಕೆಲವರ ಅನುಮಾನಾಸ್ಪದ ಚಲನೆಯನ್ನು ಸೇನಾ ಸಿಬ್ಬಂದಿ ಗಮನಿಸಿದ್ದಾರೆ. ಈ ವೇಳೆ ಪಾಕ್ ಹಾಗೂ ಭಾರತೀಯ ಪಡೆ ನಡುವೆ ಗುಂಡಿನ ಚಕಮಕಿ ಆರಂಭವಾಗಿದೆ. ಈ ಸಂದರ್ಭ ಜೆಸಿಒ ಹುತಾತ್ಮರಾಗಿದ್ದಾರೆ. ನಮ್ಮ ಸೇನೆ ಇದಕ್ಕೆ ಪ್ರತೀಕಾರ ತೀರಿಸಿಕೊಂಡಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.

ಆಗಸ್ಟ್ 28 ರಂದು ಪೂಂಚ್ ಜಿಲ್ಲೆಯ ಬಾಲಕೋಟ್​ ಸೆಕ್ಟರ್‌ನಲ್ಲಿ ಕದನ ವಿರಾಮ ಉಲ್ಲಂಘಿಸಿದ್ದ ಪಾಕಿಸ್ತಾನಿ ಪಡೆ, ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಅಪ್ರಚೋದಿತ ಗುಂಡಿನ ದಾಳಿ ನಡೆಸಿತ್ತು. ಇದೀಗ ಮತ್ತೆ ಅಪ್ರಚೋದಿತ ಗುಂಡಿನ ದಾಳಿ ಮೂಲಕ ಪಾಕಿಸ್ತಾನ ತನ್ನ ದುರ್ಬುದ್ಧಿಯನ್ನು ಮುಂದುವರಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.