ETV Bharat / bharat

ಸರ್ಕಾರಿ, ಖಾಸಗಿ ಉದ್ಯೋಗಿಗಳಿಗೆ ಆರೋಗ್ಯ ಸೇತು ಅಪ್ಲಿಕೇಶನ್ ಬಳಕೆ ಕಡ್ಡಾಯ - ಆರೋಗ್ಯ ಸೇತು ಮೊಬೈಲ್ ಅಪ್ಲಿಕೇಶನ್

ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುಲು ಆರೋಗ್ಯ ಸೇತು ಅಪ್ಲಿಕೇಶನ್‌ನ ಬಳಕೆಯನ್ನು ಸರ್ಕಾರಿ ಮತ್ತು ಖಾಸಗಿ ಉದ್ಯೋಗಿಗಳಿಗೆ ಕಡ್ಡಾಯಗೊಳಿಸಲಾಗಿದೆ.

arogya setu
arogya setu
author img

By

Published : May 2, 2020, 2:58 PM IST

ನವದೆಹಲಿ: ಸರ್ಕಾರಿ ಮತ್ತು ಖಾಸಗಿ ನೌಕರರು ಕಡ್ಡಾಯವಾಗಿ ಆರೋಗ್ಯ ಸೇತು ಮೊಬೈಲ್ ಅಪ್ಲಿಕೇಶನ್ ಬಳಸಬೇಕೆಂದು ಕೇಂದ್ರ ಸರ್ಕಾರ ತಿಳಿಸಿದೆ.

ಕಂಟೇನ್​​ಮೆಂಟ್​ ಝೋನ್​ನಲ್ಲಿ ವಾಸಿಸುತ್ತಿರುವ ಪ್ರತಿಯೊಬ್ಬರ ಮೊಬೈಲ್​ನಲ್ಲಿ ಅರೋಗ್ಯ ಸೇತು ಆ್ಯಪ್ ಕಡ್ಡಾಯವಾಗಿ ಬಳಕೆಯಾಗಬೇಕೆಂದು ಸೂಚನೆ ನೀಡಲಾಗಿದೆ.

"ಆರೋಗ್ಯ ಸೇತು ಅಪ್ಲಿಕೇಶನ್‌ನ ಬಳಕೆಯನ್ನು ಸರ್ಕಾರಿ ಮತ್ತು ಖಾಸಗಿ ಉದ್ಯೋಗಿಗಳಿಗೆ ಕಡ್ಡಾಯಗೊಳಿಸಲಾಗಿದೆ. ನೌಕರರು ಈ ಅಪ್ಲಿಕೇಶನ್‌ ಬಳಸುವಂತೆ ಖಚಿತಪಡಿಸಿಕೊಳ್ಳುವುದು ಆಯಾ ಸಂಸ್ಥೆಗಳ ಮುಖ್ಯಸ್ಥರ ಜವಾಬ್ದಾರಿಯಾಗಿದೆ" ಎಂದು ಸಚಿವಾಲಯ ತಿಳಿಸಿದೆ.

ಕೋವಿಡ್-19 ಸೋಂಕಿನ ಅಪಾಯವಿದೆಯೇ ಎಂದು ಗುರುತಿಸಲು ಆರೋಗ್ಯ ಸೇತು ಮೊಬೈಲ್ ಅಪ್ಲಿಕೇಶನ್ ಬಳಕೆದಾರರಿಗೆ ಸಹಾಯ ಮಾಡುತ್ತದೆ. ಜೊತೆಗೆ ಕೊರೊನಾ ವೈರಸ್ ಸೋಂಕನ್ನು ತಡೆಗಟ್ಟುವ ವಿಧಾನಗಳು ಮತ್ತು ಅದರ ರೋಗಲಕ್ಷಣಗಳ ಕುರಿತು ಜನರಿಗೆ ಮಾಹಿತಿಯನ್ನು ಒದಗಿಸುತ್ತದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.